ಭಾನುವಾರ ನೇರಳೆ ಮಾರ್ಗದ ಮೆಟ್ರೋದಲ್ಲಿ 3 ಗಂಟೆಗಳ ಕಾಲ ಸಂಚಾರ ರದ್ದು – ಎಲ್ಲೆಲ್ಲಿ ಸ್ಥಗಿತ?

ಬೆಂಗಳೂರು: ಮಾ 9ರ ಭಾನುವಾರದಂದು ನಮ್ಮ ಮೆಟ್ರೋದ (Namma Metro) ನೇರಳೆ ಮಾರ್ಗದಲ್ಲಿ (Purple Line) 3 ಗಂಟೆಗಳ ಕಾಲ ಭಾಗಶಃ ಸಂಚಾರ ರದ್ದಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ.ಇದನ್ನೂ ಓದಿ: ಬೆಂಗಳೂರಿನ 2ನೇ ಏರ್‌ಪೋರ್ಟ್‌ ಎಲ್ಲಿ ನಿರ್ಮಾಣ ಆಗುತ್ತೆ? – 3 ಜಾಗ ಫೈನಲ್‌, ಕೇಂದ್ರಕ್ಕೆ ರವಾನೆ

ನೇರಳೆ ಮಾರ್ಗದಲ್ಲಿ ಮೆಟ್ರೋ ಹಳಿಯ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮಾಗಡಿ ರೋಡ್ ಹಾಗೂ ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ.ಬಿ.ಆರ್ ಅಂಬೇಡ್ಕರ್ ನಿಲ್ದಾಣ ವಿಧಾನಸೌಧ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್ ಕಾಲೇಜು, ಮೆಜೆಸ್ಟಿಕ್ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರವಿರುವುದಿಲ್ಲ ಎಂದು ಮಾಹಿತಿ ನೀಡಿದೆ.

ಇದರ ಹೊರತಾಗಿ ಚಲ್ಲಘಟ್ಟದಿಂದ ಮಾಗಡಿ ರೋಡ್ ಹಾಗೂ ಎಂಜಿ ರಸ್ತೆಯಿಂದ ವೈಟ್ ಫೀಲ್ಡ್‌ವರೆಗೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದ್ದು, ಬೆಳಿಗ್ಗೆ 7 ಗಂಟೆಗೆ ಮೆಟ್ರೋ ಆರಂಭವಾಗಲಿದೆ. ಜೊತೆಗೆ ಭಾನುವಾರದಂದು ನೇರಳೆ ಮಾರ್ಗದಲ್ಲಿ ಕ್ಯೂಆರ್ ಟಿಕೆಟ್‌ಗಳ ಖರೀದಿಗೆ ಅವಕಾಶವಿರುವುದಿಲ್ಲ. ಇನ್ನೂ ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆಯಿಂದ ಮಾದಾವರ ನಡುವೆ ಬೆಳಿಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ.ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ – ಈಶ್ವರ ಖಂಡ್ರೆ