ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿ) ಶುಕ್ರವಾರ ತಿಳಿಸಿದಂತೆ, ಸೆಪ್ಟೆಂಬರ್ 18ರಿಂದ ಪ್ರತಿದಿನ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಮೆಟ್ರೋ ರೈಲುಗಳು ಕಾರ್ಯನಿರ್ವಹಿಸಲಿದೆ.
ವಾರದ ಎಲ್ಲಾ ದಿನಗಳಲ್ಲಿ ಕೊನೆಯ ಮೆಟ್ರೋ ರಾತ್ರಿ 9.30ಕ್ಕೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದೆ. ಇದನ್ನೂ ಓದಿ: ನಂಗೆ ಕಣ್ಣು ಕಾಣಿಸಲ್ಲ, ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ – ಲಸಿಕೆಗೆ ಅಜ್ಜಿ, ಅಜ್ಜಾ ನಿರಾಕರಣೆ

ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣದ ನಡುವೆ ರೈಲು ಸಂಚರಿಸಿದರೆ, ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ನಾಗಸಂದ್ರ ನಿಲ್ದಾಣಗಳ ನಡುವಿನ ರೈಲು ಸಂಚರಿಸಲಿದೆ. ಅಲ್ಲದೇ ಪ್ರತಿ 5 ಮತ್ತು 10 ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿದೆ. ಇದನ್ನೂ ಓದಿ: ಭಾನುವಾರ ಮನೆ ಬಿಟ್ಟಿದ್ದ ಮನೆ ಯಜಮಾನ ನಿನ್ನೆ ವಾಪಸ್ ಬಂದಾಗ ಕಂಡಿದ್ದು ಐವರ ಮೃತದೇಹ
ಪ್ರತಿದಿನ ಸಿಲ್ಕ್ ಇನ್ಸ್ಟಿಟ್ಯೂಟ್ ಮತ್ತು ಕೆಂಗೇರಿ ನಿಲ್ದಾಣಗಳಿಗೆ ಪ್ರತಿ 10 ನಿಮಿಷಕ್ಕೊಮ್ಮೆ ರೈಲು ಓಡಾಡಲಿದೆ. ಆದರೆ ವಾರಾಂತ್ಯಗಳಲ್ಲಿ ಮೆಟ್ರೋ ರೈಲು ಸಂಚಾರವನ್ನು ಹೆಚ್ಚಿಸಬಹುದು ಅಥವಾ ಕಡಿತಗೊಳಿಸಬಹುದು ಎಂದು ಬಿಎಂಆರ್‌ಸಿ ಸೂಚಿಸಿದೆ. ಇನ್ನೂ ಮೆಟ್ರೋ ರೈಲಿನಲ್ಲಿ ಓಡಾಡುವ ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕೈಗಳನ್ನು ಸ್ವಚ್ಛವಾಗಿ ನೋಡಿಕೊಳ್ಳುವುದು ಇತರೆ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗಿ ತಿಳಿಸಲಾಗಿದೆ.

Leave a Reply