ಹಾಸನದಲ್ಲಿ ಭೂಮಿ ಕಂಪಿಸಿದ ಅನುಭವ – ಮನೆ ಸೇರಲು ಹೆದರುತ್ತಿರುವ ಜನ

ಹಾಸನ: ಹಾಸನದ (Hassan) ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ (Earthquake) ಅನುಭವ ಆಗಿದೆ. ಇದರಿಂದ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಜಿಲ್ಲೆಯ ಅರಕಲಗೂಡು (Arkalgud) ಪಟ್ಟಣದ ಕೆಲವು ಕಡೆ ಬೆಳಿಗ್ಗೆ 10:25ರ ವೇಳೆಗೆ ಕಂಪನದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ನಿಂತಿದ್ದಾರೆ. ಇದನ್ನೂ ಓದಿ: ಗಡಿ ನುಸುಳಲು ಉಗ್ರರ ಸಂಚು – ಸೇನೆಯಿಂದ ಓರ್ವನ ಎನ್‍ಕೌಂಟರ್

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]