ಸೇನೆ ಕೆಲಸಕ್ಕಾಗಿ ನಕಲಿ ದಾಖಲೆ- 9 ಜನರ ಬಂಧನ

ವಿಜಯನಗರ: ಸೇನೆಯಲ್ಲಿ ಕೆಲಸ ಕೊಡಿಸಲು ದಾಖಲಾತಿಗಳ ತಿದ್ದುಪಡಿ ಮಾಡಿ, ನಕಲಿ ದಾಖಲೆ ಕೊಟ್ಟ ಆರೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ.

ಪ್ರಕರಣದಲ್ಲಿ ಭಾಗಿ ಆಗಿರುವ ಆರೋಪಿಗಳಾದ ವೈಭವ್, ನೇತಾಜಿ ರಾಮ್ ಸಾವಂತ್, ಜಂಬಣ್ಣ, ಅಜಿತ್ ಕೊಂಡೆ, ವೆಂಕಟೇಶ್, ಪರಶುರಾಮ್, ಮನೋಜ್ ಅವರನ್ನು ಬಂಧಿಸಲಾಗಿದೆ. ಜೊತೆಗೆ ಬಳ್ಳಾರಿ ಮೂಲದ ಇಬ್ಬರು ಪೊಲೀಸ್ ಸಿಬ್ಬಂದಿ ಅಂಕಲೇಶ್ ಹಾಗೂ ರಾಮಾಂಜನಿ ಅವರನ್ನು ಬಂಧಿಸಲಾಗಿದೆ.

ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಹಾರಾಷ್ಟ್ರ ಸೇರಿದಂತೆ ಬೇರೆ ಊರಿನವರನ್ನು ಸ್ಥಳೀಯರು ಎನ್ನುವಂತೆ ದಾಖಲೆಗಳ ಫೋರ್ಜರಿ ಮಾಡಿದ್ದರು. ಈ ನಕಲಿ ದಾಖಲಾತಿಗಾಗಿ ಐದಾರು ಲಕ್ಷ ಹಣದ ವ್ಯವಹಾರ ನಡೆದಿರುವ ಕುರಿತು ಮೂಲಗಳು ಮಾಹಿತಿ ನೀಡಿದೆ. ಇದನ್ನೂ ಓದಿ: ಡಿ.4 ರಂದು ಆಂಧ್ರಪ್ರದೇಶ, ಒಡಿಶಾಗೆ ಅಪ್ಪಳಿಸಲಿರುವ ಜವಾದ್ ಚಂಡಮಾರುತ

ಈ ಕುರಿತು ಸೇನೆಯಿಂದ ದಾಖಲಾತಿ ಪರಿಶೀಲಿಸುವಂತೆ ಮಾಹಿತಿ ಬಂದ ಹಿನ್ನೆಲೆ ಪ್ರಕರಣ ಬೆಳಕಿಗೆ ಬಂದಿದೆ. ಸೇನೆಯಲ್ಲಿರುವ ಇನ್ನೂ ಹಲವಾರು ಜನ ಇದೇ ರೀತಿ ಕೆಲಸಕ್ಕೆ ಸೇರಿರುವ ಅನುಮಾನವಿದೆ ಎಂದು ವಿಜಯನಗರ ಜಿಲ್ಲೆ ಎಸ್ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲಾ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ನನ್ನ ಹುಟ್ಟಿಸಿದ್ಯಾಕೆ?- ತಾಯಿಯ ಹೆರಿಗೆ ಮಾಡಿಸಿದ್ದ ವೈದ್ಯರ ವಿರುದ್ಧ ಯುವತಿ ಕೇಸ್

Comments

Leave a Reply

Your email address will not be published. Required fields are marked *