ಮೂರು ಶವಗಳ ಪಾದ ಮುಟ್ಟಿ ನಮಸ್ಕರಿಸಿದ ಡಿಕೆಶಿ

ಬಳ್ಳಾರಿ: ಕರ್ನಾಟಕ ಲೋಕಸಭಾ ಉಪಚುನಾವಣೆ ಪ್ರಯುಕ್ತ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಬಳ್ಳಾರಿ ಪ್ರಚಾರದಲ್ಲಿ ತೊಡಗಿದ್ದು, ಇಂದು ಜಿಲ್ಲೆಯ ವಿಮ್ಸ್ ಆವರಣದ ಶವಾಗಾರಕ್ಕೆ ಭೇಟಿ ನೀಡಿದ್ದಾರೆ.

ತಾಲೂಕಿನ ಕೊರ್ಲಗುಂದಿ ಗ್ರಾಮದ ಹೊರವಲಯದಲ್ಲಿದ್ದ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಭಾನುವಾರ ಮೃತಪಟ್ಟಿದ್ದರು. ಅವರ ಶವಗಳನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಇಂದು ಶಿವಕುಮಾರ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.

ಉಗ್ರಪ್ಪ ಯರ್ರಿಸ್ವಾಮಿ(13), ಭರತ್ ರೆಡ್ಡಿ (12) ಮತ್ತು ಹರ್ಷವರ್ಧನ ರೆಡ್ಡಿ (13) ಮೃತ ದುರ್ದೈವಿಗಳು. ಕೃಷಿ ಹೊಂಡದಲ್ಲಿ ನೀರು ಕುಡಿಯಲು ಮಕ್ಕಳು ಹೋಗಿದ್ದರು. ಈ ವೇಳೆ ಒಬ್ಬ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ನಂತರ ಆತನನ್ನು ರಕ್ಷಿಸಲು ಇಬ್ಬರು ಹೋಗಿ ಕೊನೆಗೆ ಈಜು ಬಾರದೆ ಮೂವರೂ ಮೃತಪಟ್ಟಿದ್ದರು.

ಮೃತ ಮಕ್ಕಳ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು. ಇಂದು ಶಿವಕುಮಾರ್ ಅವರು ಮೃತ ಮಕ್ಕಳ ಅಂತಿಮ ದರ್ಶನ ಪಡೆದುಕೊಂಡು ಮೂರು ಶವಗಳ ಪಾದ ಮುಟ್ಟಿ ನಮಸ್ಕರಿಸಿದ್ದಾರೆ. ಇದೇ ವೇಳೆ ಕುಟುಂಬದ ಸದಸ್ಯರಿಗೆ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಉಗ್ರಪ್ಪ ಸಾಂತ್ವಾನ ಹೇಳಿದ್ದಾರೆ.

ಇಂದು ಬಳ್ಳಾರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಕಂಪ್ಲಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಸಂಸದ ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 2 ಗಂಟೆಗೆ ಕೊಡ್ಲಿಗಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಹಗರಿಬೊಮ್ಮನಹಳ್ಳಿಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸಂಜೆ 6 ಗಂಟೆಗೆ ಬಳ್ಳಾರಿಯ ಕೌಲ್ ಬಜಾರನಲ್ಲಿ ದಿನೇಶ್ ಗುಂಡೂರಾವ್, ಮಾಜಿ ಪ್ರಧಾನಿ ದೇವೇಗೌಡ, ಕೈ ಅಭ್ಯರ್ಥಿ ಉಗ್ರಪ್ಪ ಪ್ರಚಾರ ಮಾಡಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *