ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್

ನವದೆಹಲಿ: ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ನೀಡುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಿಗಬಹುದು. ಈ ಕುರಿತು ಭಾರತ್ ಬಯೋಟೆಕ್ ಮತ್ತು ಝೈಡಸ್ ಕ್ಯಾಡಿಲಾ ಲಸಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಝೈಡಸ್ ವ್ಯಾಕ್ಸಿನ್ ಬೆಲೆ ನಿರ್ಣಯ ಮಾಡಬೇಕಿದೆ. ನವೆಂಬರ್ ವೇಳೆಗೆ ಭಾರತ್ ಬಯೋಟೆಕ್ ಈ ಲಸಿಕೆಗೆ ಅನುಮತಿ ಸಿಗಬಹುದು. ಮೂಗಿನ ಮೂಲಕ ಪಡೆಯುವ ವ್ಯಾಕ್ಸಿನ್ ಬಗ್ಗೆ ಸಹ ಚರ್ಚೆ ನಡೆದಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.

ಸಿರೋ ಸಮೀಕ್ಷೆಯಲ್ಲಿ ರಾಜ್ಯದ ಜನರಲ್ಲಿ ಶೇ.60ರಷ್ಟು ರೋಗ ನಿರೋಧಕ ಶಕ್ತಿ ಇದೆ. ಕೆಲವು ಕಡೆ ಶೇ.70ಕ್ಕೂ ಅಧಿಕ ಇದೆ. ನವೆಂಬರ್ ಡಿಸೆಂಬರ್ ವರೆಗೂ ಕಾದು ನೋಡಬೇಕು. ಕೊರೊನಾ ರೂಪಾಂತರದ ಬಗ್ಗೆ ಯೋಚನೆ ಮಾಡಬೇಕು. ಹೊಸ ರೂಪಾಂತರಿ ಬಗ್ಗೆ ಈಗಲೇ ಹೇಳುವುದು ಕಷ್ಟ. ಸಾಂಕ್ರಾಮಿಕ ರೋಗ ಗೆಲ್ಲಬೇಕು ಎಂದರೆ ಒಂದು ರಾಜ್ಯ, ದೇಶದಲ್ಲಿ ಕೈಯಲ್ಲಿ ಇಲ್ಲ. ಇಡೀ ಪ್ರಪಂಚದಲ್ಲಿ ನಿಯಂತ್ರಣ ಮಾಡಬೇಕು. ಭಾರತದಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡದ ಹೊರತು ಕೋವಿಡ್ ನಿಯಂತ್ರಣಕ್ಕೆ ಬರುತ್ತೆ ಎಂಬುದು ಗ್ಯಾರಂಟಿ ಇಲ್ಲ. ಎಲ್ಲ ಕಡೆಯೂ ಕೊರೊನಾ ನಿಯಂತ್ರಣಕ್ಕೆ ಬರಬೇಕಿದೆ ಎಂದರು. ಇದನ್ನೂ ಓದಿ: ಸಿಕ್ಕಿಂನಲ್ಲಿ ಮಿನರಲ್ ವಾಟರ್ ಬಾಟಲ್ ಬ್ಯಾನ್

ದಸರಾ ಬಳಿಕ ಸಭೆ ನಡೆಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ತಿರ್ಮಾನ ಮಾಡಲಿದ್ದೇವೆ. 1-12 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚು ರೋಗ ನಿರೋಧಕ ಶಕ್ತಿ ಇರುತ್ತದೆ. ಹೀಗಾಗಿ 1-5 ತರಗತಿಗಳನ್ನು ಶುರು ಮಾಡಬೇಕು. ಆದರೆ ಪೋಷಕರ ಅಭಿಪ್ರಾಯ ಮೇಲೆ ಕಾಲೇಜು ಶುರು ಮಾಡಿ, ಬಳಿಕ ಹಂತ ಹಂತವಾಗಿ ಹೈಸ್ಕೂಲ್ ವರೆಗೂ ಶಾಲೆಗಳನ್ನು ಆರಂಭಿಸಿದ್ದೇವೆ. ಪ್ರಾಥಮಿಕ ಶಾಲೆಗಳನ್ನೂ ಅದೇ ರೀತಿ ಆರಂಭಿಸಲಾಗುವುದು ಎಂದರು.

ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇನೆ. 9, 10ರಂದು ರಾಜ್ಯಕ್ಕೆ ಆಹ್ವಾನ ನೀಡಿದ್ದೇವೆ. ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಆಹ್ವಾನಿಸಿದ್ದೇನೆ. 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಬೆಡ್ ಸಂಖ್ಯೆ ಹೆಚ್ಚು ಮಾಡುವುದು, ಮೂಲಭೂತ ಸೌಕರ್ಯ ಹೆಚ್ಚಿಸುವುದು, ವೈದ್ಯರು, ನರ್ಸ್ ಗಳಿಗೆ ವಸತಿ ನಿಲಯ ನಿರ್ಮಿಸಲು ಚಿಂತಿಸಲಾಗಿದೆ. ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಚಿಂತಿನೆ ನಡೆದಿದೆ. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಹ್ವಾನ ನೀಡಿದ್ದೇನೆ. ಅಲ್ಲದೆ ಅನುದಾನ ನೀಡುವಂತೆ ಸಹ ಕೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

ಕೊವೀಡ್ ನಿರ್ವಹಣೆಗಾಗಿ ಮೊದಲ ಪ್ರಶಸ್ತಿ ರಾಜ್ಯ ಸರ್ಕಾರಕ್ಕೆ ಬಂದಿದೆ. ರಾಷ್ಟ್ರೀಯ ವಾಹಿನಿಯಿಂದ ಅವಾರ್ಡ್ ಬಂದಿದೆ. ಈ ಪ್ರಶಸ್ತಿಯನ್ನು ಕೊರೊನಾ ಯೋಧರಿಗೆ ಅರ್ಪಣೆ ಮಾಡುತ್ತೇನೆ. ವೈದ್ಯರಿಂದ ಎಲ್ಲ ಫ್ರಂಟ್ ಲೈನ್ ವಾರಿಯರ್ಸ್ ಗೆ ಅರ್ಪಣೆ ಮಾಡುತ್ತೇನೆ. ಎಲ್ಲರ ಶ್ರಮದಿಂದ ರಾಜ್ಯಕ್ಕೆ ಮೊದಲ ಪ್ರಶಸ್ತಿ ಬಂದಿದೆ. ಈ ಪ್ರಶಸ್ತಿ ಮತ್ತಷ್ಟು ಹುರುಪು ತುಂಬಿದ್ದು, ಮತ್ತಷ್ಟು ಕೆಲಸ ಮಾಡಲು ಪ್ರೊತ್ಸಾಹಿಸದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಿಂದ ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *