ಲಕ್ಷ್ಮೀ ಹೆಬ್ಬಾಳ್ಕರ್ ಪರ ಬ್ಯಾಟ್ ಬೀಸಿದ ಸಚಿವೆ ಜಯಮಾಲಾ

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ನನ್ನ ನಡುವೆಯೂ ಯಾವುದೇ ಜಟಾಪಟಿ ಇಲ್ಲ ಎಂದು ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಹೇಳಿದ್ದಾರೆ.

ಬೆಳಗಾವಿ ಸುವರ್ಣ ಗಾರ್ಡನ್ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವ ಜಟಾಪಟಿ ಇಲ್ಲ. ನನ್ನ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆಯೂ ಯಾವುದೇ ಅಸಮಾಧಾನವಿಲ್ಲ. ಎಲ್ಲದಕ್ಕೂ ಆ ಹೆಣ್ಣು ಮಗಳನ್ನು ಯಾಕೆ ಎಳೆದು ತರುತ್ತೀರಾ ಎಂದು ಹೇಳುವ ಮೂಲಕ ಹೆಬ್ಬಾಳ್ಕರ್ ಪರ ಬ್ಯಾಟ್ ಬೀಸಿದರು.

ಇದೇ ವೇಳೆ ಕರಾವಳಿ ಭಾಗಕ್ಕೆ ಸಭಾಪತಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಭಾಪತಿ ಆಯ್ಕೆ ವಿಚಾರದಲ್ಲಿ ಯಾವುದೇ ರಾಜಕಾರಣ ಇಲ್ಲ. ಎಸ್.ಆರ್ ಪಾಟೀಲ ಅವರು ಪಕ್ಷದ ಹಿರಿಯರು ಹಾಗೂ ಏಳು ಬಾರಿ ಆಯ್ಕೆ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಸ್ಥಾನ ಸಿಗಬಹುದು. ಉತ್ತರ ಕರ್ನಾಟಕ ರಾಜ್ಯದ ಹೃದಯ ಭಾಗ, ಉತ್ತರ ಯಾವತ್ತು ಮೇಲ್ಬಾಗದಲ್ಲಿರುತ್ತೆ. ಆ ಹೃದಯ ಭಾಗಕ್ಕೆ ತೊಂದರೆಯಾದರೆ ನಮ್ಮ ಬದುಕೇ ನಿಂತು ಹೋಗುತ್ತದೆ. ರಾಜ್ಯ ಸರ್ಕಾರ ರೈತರ ಬಹುದೊಡ್ಡ ಸಾಲಮನ್ನಾ ಮಾಡಿದ್ದು, ಇಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದರು. ಇದನ್ನು ಓದಿ: ಜಗತ್ತಲ್ಲಿ ಎಲ್ಲದಕ್ಕೂ ಔಷಧವಿದೆ, ಆದರೆ ಹೊಟ್ಟೆಕಿಚ್ಚಿಗಿಲ್ಲ: ಹೆಬ್ಬಾಳ್ಕರ್ ಗೆ ಜಯಮಾಲಾ ಟಾಂಗ್

ಪ್ರತಿಭಟನಾಕಾರರ ಮನವಿ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಗಮನಕ್ಕೆ ಹೋರಾಟಗಾರರ ಬೇಡಿಕೆಯನ್ನು ತಲುಪಿಸುತ್ತೇನೆ. ಇವರ ಬೇಡಿಕೆ ಈಡೇರಿಸಲು ಸರ್ಕಾರದ ಪರ ಬದ್ಧರಾಗಿದ್ದು, ಖಾಯಂ ಮಾಡಬೇಕು ಎಂಬ ಬೇಡಿಕೆಯೂ ಇದೆ. ಈ ಕುರಿತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಿಎಂ ಗಮನಕ್ಕೂ ತರುತ್ತೇನೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *