ಧಮ್ ಇದ್ರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ- ಶಾಸಕಿಗೆ ಈಶ್ವರಪ್ಪ ಸವಾಲು

ಮೈಸೂರು: ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ ಎಂದು ಶಾಸಕಿ ಖನೀಜಾ ಫಾತಿಮಾಗೆ ಸಚಿವ ಕೆ.ಎಸ್ ಈಶ್ವರಪ್ಪ ಸವಾಲಾಕಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು ಶಾಸಕಿ ಹೇಳಿಕೆ ವಿಚಾರವಾಗಿ ಸಚಿವರು ಖಾರವಾಗಿ ಪ್ರತಿಕ್ರಿಯಿಸಿದರು. ಹಿಜಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ ಎಂದು ಪ್ರಶ್ನಿಸಿದರು.

ನಾವು ಶಾಲೆಗೆ ಮಾತ್ರ ಹಿಜಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು ಎಂದರು. ಹಿಜಬ್ ವಿಚಾರದಲ್ಲಿ ಎಂ.ಎಲ್.ಸಿ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ ನೋಡಲು ಹಿಜಬ್ ತೆಗೆಯಬೇಕಾ? ಇಬ್ರಾಹಿಂ ಅವರ ಈ ಹೇಳಿಕೆ ಯಾರೂ ಒಪ್ಪುವಂತದಲ್ಲ. ಸಮವಸ್ತ್ರದ ಹಿನ್ನೆಲೆಯಿಂದ ಈ ಆದೇಶ ಮಾಡಲಾಗಿದೆ ಎಂದರು. ಇದನ್ನೂ ಓದಿ: ಹಿಜಬ್-ಕೇಸರಿ ಪ್ರತಿಭಟನೆಗೆ ಸಾರ್ವಜನಿಕರ ಎಂಟ್ರಿ- ಮುಸ್ಲಿಂ, ಹಿಂದೂ ಸಂಘಟನೆಗಳಿಂದ ಇಂದು ಧರಣಿ

ಹಿಜಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು ಈಗ ಅಲ್ಲಿಂದಲೇ ಹಿಜಬ್ ವಿವಾದ ಸೃಷ್ಟಿಯಾಗಿದೆ. ಹಿಜಬ್ ವಿವಾದದ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಇದೆ. ವೋಟ್ ಬ್ಯಾಂಕ್‍ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ಕೆಲಸವಾಗುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರು ಮನಸು ಮಾಡಿದ್ದರೆ ಸಮಸ್ಯೆ ಬಗರಹರಿಸಬಹುದಿತ್ತು. ಆ ಆರು ಜನ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಬಹುದಿತ್ತು. ಆದರೆ ಕಾಂಗ್ರೆಸ್‍ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಹಿಂದೆ ವೀರಶೈವ ಲಿಂಗಾಯತ ಧರ್ಮ, ನಂತರ ಮತಾಂತರದ ವಿಷಯ ಗೋಹತ್ಯೆ, ಈಗ ಹಿಜವ್ ಅವರ ರಾಜಕೀಯ ವಿಚಾರವಾಗಿದೆ. ಹಿಂದೂ ಮುಸ್ಲಿಂ ಒಡೆದಿದ್ದು ಕಾಂಗ್ರೆಸ್ ಅಪವಾದ ಮಾತ್ರ ಬಿಜೆಪಿ ಮೇಲೆ ಎಂದು ಸಚಿವರು ಕಿಡಿಕಾರಿದರು.

Comments

Leave a Reply

Your email address will not be published. Required fields are marked *