ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಗುರುರಾಜ್‍ಗೆ ಸರ್ಕಾರಿ ಕೆಲಸ, 25 ಲಕ್ಷ ನಗದು ಬಹುಮಾನ- ಪ್ರಮೋದ್ ಮಧ್ವರಾಜ್

ಉಡುಪಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವಿಜಯ ಯಾತ್ರೆ ಆರಂಭವಾಗಿದೆ. ಭಾರತದ ಮೊದಲ ಪದಕ ಕರ್ನಾಟಕದ ಉಡುಪಿಗೆ ಬಂದಿದೆ. ವೇಟ್ ಲಿಫ್ಟಿಂಗ್ ನಲ್ಲಿ ಕುಂದಾಪುರದ ಗುರುರಾಜ್ ಪೂಜಾರಿ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.

ಈ ಕುರಿತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮೊದಲು ಗುರುರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದ್ರು. ಬಳಿಕ ಇದಕ್ಕಿಂತ ಸಂತೋಷದ ಕ್ಷಣ ನನಗೆ ಬೇರೆ ಇಲ್ಲ. ತಿಂಗಳ ಹಿಂದಷ್ಟೇ ಏಕಲವ್ಯ ಪ್ರಶಸ್ತಿ ನೀಡಲಾಗಿತ್ತು. ಕಾಮನ್ ವೆಲ್ತ್ ಪ್ರಶಸ್ತಿ ಗೆದ್ದ ಗುರುರಾಜ್ ಗೆ ಸರ್ಕಾರದ ಗ್ರೂಪ್ ಬಿ ಉದ್ಯೋಗ ಸಿಗುತ್ತದೆ. ಜೊತೆಗೆ 25 ಲಕ್ಷ ರೂಪಾಯಿ ಬಹುಮಾನ ಮೊತ್ತ ಸಿಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕನ್ನಡಿಗನ ಕೇಕೆ- ಬೆಳ್ಳಿ ಪದಕ ಗೆದ್ದ ಉಡುಪಿಯ ಗುರುರಾಜ್

ರಾಜ್ಯದಲ್ಲಿ ಕ್ರೀಡಾನೀತಿ ಈಗಾಗಲೇ ಘೋಷಣೆ ಮಾಡಲಾಗಿದೆ. ಸರ್ಕಾರದ ನೇಮಕಾತಿಯಲ್ಲಿ ಮೀಸಲಾತಿ ಇದೆ. 48 ಕೋಟಿ ರೂಪಾಯಿ ಈಗಾಗಲೇ ಮೀಸಲಿಟ್ಟು ವಿತರಿಸಲಾಗಿದೆ. ಈಗ ಕಾನೂನಿನ ಅನ್ವಯ ಮೊತ್ತ ಮತ್ತು ಸರ್ಕಾರಿ ಕೆಲಸ ಸಿಗುತ್ತದೆ ಅಂದ್ರು. ಇದನ್ನೂ ಓದಿ: ವೇಟ್‍ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಚಿನ್ನ ಗೆದ್ದುಕೊಟ್ಟ ಮೀರಾಬಾಯಿ

ಖೇಲೋ ಇಂಡಿಯಾದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಕ್ರೀಡಾಪಟುಗಳ ಬೆಂಬಲಕ್ಕೆ ಸರ್ಕಾರ ಸಿದ್ಧವಿದೆ. ಒಲಿಂಪಿಕ್ಸ್ ನಲ್ಲಿ ನಮ್ಮ ಕ್ರೀಡಾಪಟುಗಳು ಸಾಧನೆ ಮಾಡಬೇಕಿದೆ, ಇದಕ್ಕೆ ಒಂದು ದಿನದ ಪರಿಶ್ರಮ ಸಾಲದು. ನಿರಂತರ ಶ್ರಮಕ್ಕೆ ಅಡಿಗಲ್ಲು ಹಾಕಲಾಗಿದೆ. ಬಡವರ- ಮಧ್ಯಮ ವರ್ಗದ ಕುಟುಂಬದಿಂದ ಬಂದ ಗುರುರಾಜ್ ಪೂಜಾರಿಯಂತವರಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ನುಡಿದ್ರು. ಇದನ್ನೂ ಓದಿ: ದಾಖಲೆ ಮುರಿಯಲೇಬೇಕಿತ್ತು, ಮುಂದಿನ ಗುರಿ ಏಷ್ಯನ್ ಗೇಮ್ಸ್: ಮೀರಾ ಬಾಯಿ

Comments

Leave a Reply

Your email address will not be published. Required fields are marked *