ರಾಯಚೂರು: ಆಪರೇಷನ್ ಕಮಲಕ್ಕೆ ಒಳಗಾದ ತುರುವೆಕೆರೆ ಮಾಜಿ ಶಾಸಕ ಜಗ್ಗೇಶ್ ಅವರ ರಾಜಕೀಯ ಭವಿಷ್ಯವೇ ಹಾಳಾಗಿದೆ. ಕಾಂಗ್ರೆಸ್ ಶಾಸಕರು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಸಚಿವರು, ಮಾಜಿ ಶಾಸಕ ಸಿ.ಪಿ.ಯೋಗಿಶ್ವರ್ ಬಿಜೆಪಿ ಸೇರುವಂತೆ ಆಮಿಷ ಒಡ್ಡಿದ್ದರು. ಆದರೆ ನಾನು ಅವರ ಆಮಿಷಕ್ಕೆ ಒಳಗಾಗಿಲ್ಲ. ನಾನು ಬಿಜೆಪಿ ಸೇರಲ್ಲ ಅಂತ ಯೋಗಿಶ್ವರ್‍ಗೆ ಬೈದಿದ್ದೇನೆ. ಚುನಾವಣೆಗೆ ಮುನ್ನವೇ ನನಗೆ ಒತ್ತಾಯಿಸಿ, ಸಚಿವ ಸ್ಥಾನ ಕೊಡುವುದಾಗಿ ಆಮಿಷ ಒಡ್ಡಿದ್ದರು. ಅಂದು ಬೈದಿದ್ದಕ್ಕೆ ಈಗ ಯೋಗಿಶ್ವರ್ ನನ್ನನ್ನ ಸಂಪರ್ಕಿಸಿಲ್ಲ ಎಂದು ತಿಳಿಸಿದರು.

ಬಿಜೆಪಿಯವರು ಸರ್ಕಾರ ಅತಂತ್ರಗೊಳಿಸುವ ಕೆಲಸ ಮಾಡಬಾರದು. ಬಿಜೆಪಿಯಿಂದ ನಮಗೆ ಯಾವುದೇ ಭಯವಿಲ್ಲ. ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಸಹೋದರರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದ ಸಚಿವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದರು. ಅದಕ್ಕೂ ಬೆಳಗಾವಿ ಗೊಂದಲಕ್ಕೂ ಸಂಬಂಧವಿಲ್ಲ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


Leave a Reply