ಕರ್ನಾಟಕದಲ್ಲಿ ಕರೋನ ವೈರಸ್ ಪತ್ತೆಯಾಗಿಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ

ಮೈಸೂರು: ಕರ್ನಾಟಕದಲ್ಲಿ ಕರೋನ ವೈರಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಕರೋನ ವೈರಸ್ ಹರಡದಂತೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ವಿದೇಶದಿಂದ ಬಂದಿದ್ದ 44 ಮಂದಿ ಪ್ರವಾಸಿಗರ ರಕ್ತ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 29 ರಕ್ತದಲ್ಲಿ ಕರೋನ ವೈರಸ್ ನೆಗೆಟಿವ್ ಎಂಬ ವರದಿ ಬಂದಿದೆ. ಉಳಿದವರ ರಕ್ತ ಪರೀಕ್ಷೆ ನಡೆಯುತ್ತಿದೆ ಎಂದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದ್ದು, 10 ಹಾಸಿಗೆವುಳ್ಳ ವಾರ್ಡ್‍ಗಳನ್ನು ಕರೋನಾಗೆ ಮೀಸಲಿಡಲಾಗಿದೆ. ಈವರೆಗೂ ರಾಜ್ಯದಲ್ಲಿ ಒಂದು ಕರೋನ ಪ್ರಕರಣ ದಾಖಲಾಗಿಲ್ಲ. ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಔಷಧಿಯನ್ನು ಹೊರ ದೇಶದಿಂದ ತರಿಸಲು ಸಿದ್ಧರಿದ್ದೇವೆ. ರೋಗಿಗಳ ಚಿಕಿತ್ಸಾ ವೆಚ್ಚ ಬರಿಸಲು ಸರ್ಕಾರ ಸಿದ್ಧವಿದೆ. ಈ ರೋಗಕ್ಕೆ ಆಯುರ್ವೇದದಲ್ಲಿ ಔಷಧವಿದ್ದು ಅದನ್ನು ಬಳಿಸಿಕೊಳ್ಳುತ್ತೇವೆ. ವಿಮಾನ ನಿಲ್ದಾಣಗಳಿಗೆ ಚೀನಾದಿಂದ ಬರುವ ಪ್ರವಾಸಿಗರಿಗೆ ಔಷಧಿ ಸಿಂಪಡಿಸಿ ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ವಿವರಿಸಿದರು. ಇದನ್ನು ಓದಿ: ಭಾರತಕ್ಕೂ ವಕ್ಕರಿಸಿದ ಕರೋನಾ ವೈರಸ್ ಮಹಾಮಾರಿ

Comments

Leave a Reply

Your email address will not be published. Required fields are marked *