ಬಿಎಸ್‍ವೈ ಹೇಳಿಕೆ ಬೆನ್ನಲ್ಲೇ ಆ್ಯಕ್ಟೀವ್ ಆದ ವಿ.ಸೋಮಣ್ಣ ಬೆಂಬಲಿಗರು

ಮೈಸೂರು: ಸಚಿವ ವಿ.ಸೋಮಣ್ಣ (V. Somanna) ಉಳಿಸಿಕೊಳ್ಳುವ ಕಾರ್ಯತಂತ್ರ ಬಿಜೆಪಿಯಲ್ಲಿ ಇದೀಗ ಶುರುವಾಗಿದೆ. ನಿಮ್ಮೊಂದಿಗೆ ನಾವೆಲ್ಲರೂ ಇದ್ದೇವೆ ಎಂದು ಬೆಂಬಲಿಗರು ಅಭಿಯಾನ ಶುರು ಮಾಡಿದ್ದಾರೆ.

ಬಿಎಸ್‍ವೈ (B.S Yediyurappa) ಹೇಳಿಕೆ ಬೆನ್ನಲ್ಲೇ ಆ್ಯಕ್ಟೀವ್ ಆದ ಸೋಮಣ್ಣ ಸಂಗಡಿಗರು, ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಹೈಕಮಾಂಡ್ ಗೆ ಒತ್ತಡ ಹಾಕಲು ಮೈಸೂರಿನ ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಲಿದ್ದಾರೆ.

ಸೋಮಣ್ಣ ಕಾಂಗ್ರೆಸ್ (Congress) ಸೇರುತ್ತಾರೆ ಎನ್ನುವ ಮಾತು ಬಂದ ಬೆನ್ನಲ್ಲೇ ಈ ಬೆಳವಣಿಗೆಗಳು ನಡೆಯುತ್ತವೆ. ಮೈಸೂರು ಭಾಗದ ಪ್ರಮುಖ ಮುಖಂಡರನ್ನ ಒಳಗೊಂಡ ಸಭೆಯಲ್ಲಿ ಹೈಕಮಾಂಡ್ ಮೇಲೆ ಒತ್ತಡ ಏರಲು ಚಿಂತನೆ ನಡೆಸಲಾಗುತ್ತಿದೆ.

ಸೋಮಣ್ಣ ಸಂಘಟನಾ ಚತುರ. ಹಳೆ ಮೈಸೂರು ಭಾಗಕ್ಕೆ ಮಹಾಶಕ್ತಿ. ಅವರ ಹಿರಿತನದ ಲಾಭ ಬಿಜೆಪಿಗೆ ಸಿಗಬೇಕು. ಪಕ್ಷಕ್ಕೆ ಅವರು ಕೊಟ್ಟ ಕೊಡುಗೆ ವ್ಯರ್ಥವಾಗದಿರಲಿ ಎಂದು ಕೂಗು ಎದ್ದಿದೆ. ಇದನ್ನೂ ಓದಿ: ಬಿಜೆಪಿಯ ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ- ಆಕಾಂಕ್ಷಿಗಳಿಗೆ ಬಿಎಸ್‍ವೈ ಶಾಕ್

ಬಿಎಸ್‍ವೈ ಹೇಳಿದ್ದೇನು..?: ಇತ್ತೀಚೆಗೆ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಿಎಂ, ಬಿಜೆಪಿ ಪಕ್ಷಕ್ಕೆ ಯಾರು ಬರುತ್ತಾರೆ ಅವರಿಗೆ ಸ್ವಾಗತ. ಯಾರು ಪಕ್ಷ ಬಿಟ್ಟು ಹೋಗ್ತಾರೆ ಅವರು ಬಿಟ್ಟು ಹೋಗಬಹುದು. ನಾಲ್ಕೈದು ಹಾಲಿ ಶಾಸಕರನ್ನು ಬಿಟ್ಟು ಉಳಿದ ಎಲ್ಲಾ ಬಿಜೆಪಿ (BJP) ಶಾಸಕರಿಗೆ ಟಿಕೆಟ್ ಕೊಡಲಾಗುವುದು. ಆದಷ್ಟು ಬೇಗ ಬಿಜೆಪಿ ಹುರಿಯಾಳುಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *