ಕಿಡ್ನಾಪ್‍ಗೈದು ಕಾಡಿನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಹರಿಬಿಟ್ಟು ಸಿಕ್ಕಿಬಿದ್ರು

ದಿಸ್‍ಪುರ್: ಅಪಹರಣಗೈದು ಕಾಡಿನಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳನ್ನು ವಿಡಿಯೋ ಆಧಾರದಲ್ಲಿ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಕಳೆದ ತಿಂಗಳ 25ರಂದು 5 ಮಂದಿ ಕಾಮುಕರು ಅಕಾಶಿಗಂಗಾ ಮೀಸಲು ಅರಣ್ಯ ಪ್ರದೇಶದ ದಿಘಾಲ್ಜಹರುನಿ ಗ್ರಾಮದಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸೆಗಿ, ಆ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆದ ಬಳಿಕ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದರು. ವಿಡಿಯೋ ಆಧಾರದ ಮೇಲೆಯೇ ಇಂದು ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮಾರ್ಚ್ 25ರಂದು ಬಾಲಕಿ ತನ್ನ ಬಾವನ ಜೊತೆ ಸಂಬಂಧಿಕರ ಮನೆಗೆ ತೆರಳುತ್ತಿದ್ದಳು. ಆಗ ದಾರಿಯಲ್ಲಿ 5 ಮಂದಿ ದುಷ್ಕರ್ಮಿಗಳು ಅವರಿಬ್ಬರನ್ನು ಅಡ್ಡಗಟ್ಟಿ ಬಾಲಕಿಯನ್ನು ಕಾಡಿನೊಳಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಅವರಲ್ಲಿ ಒಬ್ಬ ಆರೋಪಿ ಅತ್ಯಾಚಾರ ಮಾಡುತ್ತಿರುವ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆಹಿಡಿದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸಂಬಂಧ ಬಾಲಕಿ ಹಾಗೂ ಆಕೆಯ ಪೋಷಕರು ಬುಧವಾರ ಎಫ್‍ಐಆರ್ ದಾಖಲಿಸಿದ್ದು, ಬಿರುಸಿನ ತನಿಖೆ ನಡೆಸಿದ ಪೊಲೀಸರು ಇಂದು ಬಾಲಕಿಯ ಬಾವನನ್ನು ವಿಚಾರಣೆಗೆ ಒಳಪಡಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದ್ರೆ ಪ್ರಕರಣದಲ್ಲಿ ಶಾಮೀಲಾಗಿದ್ದ ಉಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

Comments

Leave a Reply

Your email address will not be published. Required fields are marked *