ಏನೋ ತೋರಿಸ್ತೀನಿ ಅಂತ ಟೆರೇಸ್‌ಗೆ ಕರ್ಕೊಂಡು ಹೋಗಿ ಬಾಲಕಿಯ ಮೇಲೆ ರೇಪ್

ನವದೆಹಲಿ: 30 ವರ್ಷದ ವ್ಯಕ್ತಿಯೊಬ್ಬ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಕೊಲೆ ಮಾಡಲು ಯತ್ನಿಸಿರುವ ಘಟನೆ ಪೂರ್ವ ದೆಹಲಿಯ ಮಧು ವಿಹಾರ್ ಮನೆಯ ಟೆರೇಸ್ ನಲ್ಲಿ ನಡೆದಿದೆ.

ಆರೋಪಿಯನ್ನು ಮನೀಷ್ ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಆಕೆಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ?
ಆರೋಪಿ ಮನೀಶ್ ತನ್ನ ಮನೆಯ ಹತ್ತಿರ ಬಾಲಕಿ ಅಂಗಡಿಗೆ ಹೋಗುವುದನ್ನು ಗಮನಿಸಿದ್ದಾನೆ. ಬಳಿಕ ಬಾಲಕಿಯ ಬಳಿ ಹೋಗಿ ನಿನಗೆ ಏನನ್ನೋ ತೋರಿಸುತ್ತೀನಿ ಬಾ ಎಂದು ಸುಳ್ಳು ಹೇಳಿ ಆಕೆಯನ್ನು ಎತ್ತಿಕೊಂಡು ಮಧು ವಿಹಾರ್ ನಲ್ಲಿರುವ ಮನೆಯ ಟೆರೇಸ್ ಮೇಲೆ ಹೋಗಿದ್ದಾನೆ. ಅಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಈ ವೇಳೆ ಬಾಲಕಿ ಕಿರುಚಾಡಿದ್ದಾಳೆ. ಆಗ ಆರೋಪಿ ಭಯಗೊಂಡು ಬಾಲಕಿಯ ಬಾಯಿಯನ್ನು ಮುಚ್ಚಿ ಕೊಲೆ ಮಾಡಲು ಯತ್ನಿಸಿದ್ದಾನೆ. ಆದರೆ ಬಾಲಕಿಯ ಹೇಗೋ ಆರೋಪಿಯಿಂದ ತಪ್ಪಿಸಿಕೊಂಡು ನೆರೆಹೊರೆಯವರನ್ನು ಕರೆದಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಓಡಿ ಬಂದಿದ್ದಾರೆ.

ನೆರೆಹೊರೆಯವರು ಬರುವುದನ್ನು ನೋಡಿದ ಆರೋಪಿ ಮನೀಷ್ ಪರಾರಿಯಾಗಲೂ ಪ್ರಯತ್ನ ಮಾಡಿದ್ದಾನೆ. ಆದರೆ ಸ್ಥಳೀಯರು ಆತನನ್ನು ಹಿಡಿದು ಪೊಲೀಸ್ ಬರುವರೆಗೂ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *