14ರ ಮಗಳ ಮೇಲೆಯೇ ಮಲತಂದೆಯಿಂದ ಅತ್ಯಾಚಾರ- ಈಗ 3 ತಿಂಗ್ಳ ಗರ್ಭಿಣಿ!

ಭೋಪಾಲ್: 14 ವರ್ಷದ ಮಗಳ ಮೇಲೆ ಮಲ ತಂದೆಯೊಬ್ಬ 5 ತಿಂಗಳಿಂದ ನಿರಂತರ ಅತ್ಯಾಚಾರವೆಸಗಿದ್ದು, ಸದ್ಯ ಆಕೆ ಗರ್ಭಿಣಿಯಾಗಿರೋ ಘಟನೆಯೊಂದು ಮಧ್ಯಪ್ರದೇಶದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ದೇವಾಸ್ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆ ಬುಧವಾರ ವಾಂತಿ ಮಾಡಿಕೊಂಡಿದ್ದಾಳೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಈಕೆ ಗರ್ಭಿಣಿಯಾಗಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಆ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಅಂತ ಪೊಲೀಸರು ತಿಳಿಸಿದ್ದಾರೆ.

ಮಲತಂದೆ 5 ತಿಂಗಳಿಂದಲೂ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಮಾತ್ರವಲ್ಲದೇ ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದನು. ಈಕೆ ಈಗ 3 ತಿಂಗಳ ಗರ್ಭಿಣಿಯಾಗಿದ್ದಾಳೆ ಅಂತ ಖುರ್ತಯಾನ್ ಪೊಲೀಸ್ ಠಾಣೆಯ ಉಸ್ತುವಾರಿ ಬಿಶ್ವದೀಪ್ ಸಿಂಗ್ ಪರಿಹಾರ್ ಹೇಳಿದ್ದಾರೆ.

ಸದ್ಯ ಆರೋಪಿ ವಿಜಯ್ ಬೈರಗಿಯನ್ನು ಬಂಧಿಸಲಾಗಿದೆ. ಇನ್ನು ಸಂತ್ರಸ್ಥೆಗೆ ಖುರ್ಟಯಾನ್ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಸುಧಾರಿಸಿದ ಬಳಿಕ ಬಿಡುಗಡೆ ಮಾಡಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

Comments

Leave a Reply

Your email address will not be published. Required fields are marked *