ಫ್ಲಾಟ್‌ಗೆ ಕರೆಸಿಕೊಂಡು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌; ನಾಲ್ವರ ಬಂಧನ

ಜೈಪುರ: ರಾಜಸ್ಥಾನದ (Rajasthan) ಕೋಚಿಂಗ್ ಹಬ್ ಕೋಟಾದಲ್ಲಿ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಸಹ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಫ್ಲಾಟ್‌ಗೆ ಕರೆಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿದ್ದುಕೊಂಡೇ ಮಹಿಳೆಗೆ ಬೆತ್ತಲೆ ಫೋಟೊ ಕಳಿಸಿ ಬ್ಲ್ಯಾಕ್‌ಮೇಲ್‌ – 5 ಲಕ್ಷಕ್ಕೆ ರೌಡಿ ಶೀಟರ್ ಡಿಮ್ಯಾಂಡ್

STOP RAPE

ಸಂತ್ರಸ್ತ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಮುಖ ಆರೋಪಿಯೊಬ್ಬನ ಪರಿಚಯವಾಗಿತ್ತು. ಈ ಘಟನೆ ಫೆಬ್ರವರಿ 10 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿರುವ ಕೋಟ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ