ಫಸಲಿಗೆ ಬಂದ 70ಕ್ಕೂ ಹೆಚ್ಚು ತೆಂಗಿನ ಮರಗಳನ್ನು ಕಡಿದ ಕಿಡಿಗೇಡಿಗಳು – ಕಣ್ಣೀರಿಟ್ಟ ರೈತ

ಹಾಸನ: ಜಮೀನು ವಿವಾದದ ಹಿನ್ನಲೆಯಲ್ಲಿ 70ಕ್ಕೂ ಹೆಚ್ಚು ತೆಂಗಿನಮರಗಳನ್ನು ಕಿಡಿಗೇಡಿಗಳು ನಾಶ ಮಾಡಿದ ಘಟನೆ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೃಷ್ಣಮೂರ್ತಿ ಹಾಗೂ ಕುಶಾಲ ಎಂಬವರ ಜಮೀನಿನಲ್ಲಿ ಬೆಳೆದಿದ್ದ ತೆಂಗಿನ ಮರಗಳನ್ನು ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಜಮೀನಿನ ಬಳಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಐದು ವರ್ಷಗಳಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನಮರಗಳನ್ನು ಕಳೆದುಕೊಂಡು ರೈತರು (Farmer) ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಹಣಕ್ಕಾಗಿ ಪಾಕ್‍ಗೆ ಸೇನಾ ಮಾಹಿತಿ – ಇಬ್ಬರು ಶಂಕಿತರು ಅರೆಸ್ಟ್

ನುಗ್ಗೇಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ.

ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅವರಿಂದಲೇ ಆಗಿರುವ ನಷ್ಟ ಭರಿಸುವಂತೆ ರೈತ ಕೃಷ್ಣಮೂರ್ತಿ ಹಾಗೂ ಕುಶಾಲ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ಬರ್ಬರ ಹತ್ಯೆ – 2ನೇ ಹೆಂಡತಿಯ ಅಕ್ರಮ ಸಂಬಂಧವೇ ಕಾರಣ ಎಂದ ಮೊದಲ ಪತ್ನಿ