ಆನೇಕಲ್‍ನಲ್ಲಿ ಜೆಡಿಎಸ್ ಯುವಘಟಕದ ಅಧ್ಯಕ್ಷನ ಮೇಲೆ ಹಲ್ಲೆ

ಆನೇಕಲ್(ಬೆಂಗಳೂರು): ಇಲ್ಲಿನ ಜೆಡಿಎಸ್ ಯುವಘಟಕದ ಅಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಹಲ್ಲೆಗೊಳಗಾಗಿರುವವರನ್ನು ರುದ್ರೇಶ್ ಎಂದು ಗುರುತಿಸಲಾಗಿದೆ. ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಭಾನುವಾರ 8.30ರ ಸುಮಾರಿಗೆ ಮನೆಗೆ ತೆರಳುವ ಸಂದರ್ಭದಲ್ಲಿ ಘಟನೆ ನಡೆದಿದೆ.

ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಹೆಲ್ಮೆಟ್ ನಿಂದ ಮನಬಂದಂತೆ ಥಳಿಸಿ ಮಾರಣಾಂತಿಕವಾ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದ ರುದ್ರೇಶ್ ಅವರನ್ನು ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಗಮನಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ರಾಜಕೀಯ ಪ್ರೇರಿತರಾಗಿ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜಣ್ಣನ ಜೊತೆ ಗುರುತಿಸಿಕೊಂಡಿದ್ದ ರುದ್ರೇಶ್, ಇತ್ತೀಚೆಗೆ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿದ್ದರು. ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ

ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Comments

Leave a Reply

Your email address will not be published. Required fields are marked *