`ನಾಪತ್ತೆ’ಯಾಗಿದ್ದ ಅತುಲ್ ಸುಭಾಷ್ ಪುತ್ರ ಹರ್ಯಾಣ ಬೋರ್ಡಿಂಗ್ ಸ್ಕೂಲ್‌ನಲ್ಲಿ – ಖಚಿತಪಡಿಸಿದ ಫರಿದಾಬಾದ್ ಶಾಲೆ

ಛತ್ತಿಸಗಢ: ನಾಪತ್ತೆಯಾಗಿದ್ದ ಅತುಲ್ ಸುಭಾಷ್ (Atul Subhash) ಪುತ್ರ ಹರಿಯಾಣದ ಫರಿದಾಬಾದ್ (Faridabad) ಬೋರ್ಡಿಂಗ್ ಸ್ಕೂಲ್‌ನ ಹಾಸ್ಟೆಲ್‌ನಲ್ಲಿ ಇರುವುದಾಗಿ ಶಿಕ್ಷಣ ಸಂಸ್ಥೆ ಖಚಿತಪಡಿಸಿದೆ.

ಬೆಂಗಳೂರು (Bengaluru) ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ತಾಯಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ನಡೆಸುತ್ತಿರುವ ವೇಳೆ ಈ ಬೆಳವಣಿಗೆ ನಡೆದಿದೆ.ಇದನ್ನೂ ಓದಿ: ಚಲಿಸುತ್ತಿದ್ದ ಓಮಿನಿಯಲ್ಲಿ ಏಕಾಏಕಿ ಬೆಂಕಿ – ಸುಟ್ಟು ಕರಕಲು

ಮಗುವಿಗಾಗಿ ತನಿಖೆ ನಡೆಸಿದ್ದ ಬೆಂಗಳೂರಿನ ಮಾರತಹಳ್ಳಿ ಪೊಲೀಸರಿಗೆ ಶಾಲಾ ಆಡಳಿತ ಮಂಡಳಿ ಪತ್ರ ಬರೆದಿದ್ದು, ಹರಿಯಾಣದ (Haryana) ಫರಿದಾಬಾದ್‌ನ ಬೋರ್ಡಿಂಗ್ ಶಾಲೆಯೊಂದು ದೃಢಪಡಿಸಿದೆ. ಪತ್ರದಲ್ಲಿ ಇತ್ತೀಚಿಗೆ ಪತ್ನಿಯ ಕಿರುಕುಳದ ಆರೋಪದಲ್ಲಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ ಅತುಲ್ ಸುಭಾಷ್ ಅವರ ಮಗು ನಮ್ಮ ಹಾಸ್ಟೆಲ್‌ನಲ್ಲಿದ್ದಾನೆ. ನಾಲ್ಕು ವರ್ಷದ ಬಾಲಕ ನರ್ಸರಿಯಲ್ಲಿ ಓದುತ್ತಿದ್ದಾನೆ. ಆತನ ತಾಯಿ ನಿಕಿತಾ ಸಿಂಘಾನಿಯಾ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರು. ಜೊತೆಗೆ ಮಗುವಿಗೆ ತಾಯಿಯಾಗಿ ತಾನೊಬ್ಬಳೇ ಇರುವುದಾಗಿ ಹೇಳಿಕೊಂಡಿದ್ದಳು ಎಂದು ಉಲ್ಲೇಖಿಸಿದ್ದಾರೆ.

ಇನ್ನೂ ಸದ್ಯ ಚಳಿಗಾಲದ ರಜೆಯಿದ್ದು, ಮಗುವನ್ನು ಕರೆದುಕೊಂಡು ಹೋಗಲು ಯಾರೂ ಬರದ ಕಾರಣ ಮಗುವನ್ನು ಹಾಸ್ಟೆಲ್‌ನಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

ಏನಿದು ಪ್ರಕರಣ?
ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್‌ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್‌ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.ಇದನ್ನೂ ಓದಿ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಹಾಡಹಗಲೇ ಚಾಕು ಇರಿದ ಸ್ನೇಹಿತ – ಆರೋಪಿ ಅರೆಸ್ಟ್