ಶಿವರಾಜ್ ಪಾಟೀಲ್, ಶರಣಗೌಡ ಬಯ್ಯಾಪುರಗೆ ಕೊರೊನಾ ದೃಢ

ರಾಯಚೂರು: ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಶಾಸಕ ಶಿವರಾಜ್ ಪಾಟೀಲ್ ಹಾಗೂ ಎಮ್‍ಎಲ್‍ಸಿ ಶರಣಗೌಡ ಬಯ್ಯಾಪುರ ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಹಾಗೂ ಎಮ್‍ಎಲ್‍ಸಿ, ತಮ್ಮ ಸಂಪರ್ಕಕ್ಕೆ ಬಂದಿರುವವರೆಲ್ಲರಿಗೂ ಕೊರೊನಾ ಟೆಸ್ಟ್‍ಗೆ ಒಳಪಡುವಂತೆ ಮನವಿ ಮಾಡಿದ್ದಾರೆ.

ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದ್ದು ಸಚಿವರು, ಶಾಸಕರಲ್ಲಿ ಕೊರೊನಾ ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್, ಮಾಧುಸ್ವಾಮಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದನ್ನೂ ಓದಿ: 800 ವರ್ಷಗಳ ಇತಿಹಾಸವಿರುವ ಪುರಾತನ ದೇವಾಲಯದಲ್ಲಿ ಸರಳ ವೈಕುಂಠ ಏಕಾದಶಿ

ಜೊತೆಗೆ ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದ್ದು, ಶಾಲಾ ವಿದ್ಯಾರ್ಥಿಗಳಲ್ಲೂ ಸೋಂಕು ಕಾಣಿಸಿಕೊಂಡಿದೆ. ದೇವದುರ್ಗ ತಾಲೂಕಿನ ಜಾಲಹಳ್ಳಿ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ 5 ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿದೆ. ಜಾಲಹಳ್ಳಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಒಟ್ಟು 300 ವಿದ್ಯಾರ್ಥಿನಿಯರು ಇದ್ದಾರೆ. ಪ್ರಾಥಮಿಕ, ದ್ವಿತೀಯ ಸಂಪರ್ಕಿತರು ಸೇರಿ ಶಾಲೆಯ ಎಲ್ಲಾ ವಿದ್ಯಾರ್ಥಿನಿಯರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಸೋಂಕು ಪತ್ತೆ ಹಿನ್ನೆಲೆ ಶಾಲೆಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು

Comments

Leave a Reply

Your email address will not be published. Required fields are marked *