ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಬಂಧಿಯಾಗಿರುವ ಶಾಸಕ ಹ್ಯಾರೀಸ್ ಮಗ ನಲಪಾಡ್ ಇದೀಗ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಜಾಮೀನು ಅರ್ಜಿ ವಜಾಗೊಂಡು 60 ದಿನವಾದ್ರೂ ಜಾರ್ಜ್ ಶೀಟ್ ಸಲ್ಲಿಸದ ಕಾರಣ ಜಾಮೀನು ನೀಡುವಂತೆ ನಲಪಾಡ್ ಅರ್ಜಿ ಸಲ್ಲಿಸಿದ್ದಾನೆ. ಆದ್ರೆ ಜಾಮೀನು ಅರ್ಜಿಗೆ ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾನೂನು ಪ್ರಕಾರ 90 ದಿನಗಳ ಒಳಗೆ ಚಾರ್ಜ್ ಶೀಟ್ ಸಲ್ಲಿಸಬಹುದು. ಹಾಗಾಗಿ ಬೇಗ ಚಾರ್ಜ್ ಶೀಟ್ ಸಲ್ಲಿಸುವಂತೆ ತನಿಖಾ ಅಧಿಕಾರಿಗೆ ಒತ್ತಡ ಹೇರುವಂತಿಲ್ಲ. ಅಧಿಕಾರಿಗಳು ಮೇ 18ರೊಳಗೆ ಯಾವಾಗಾದ್ರು ಜಾರ್ಜ್ ಶೀಟ್ ಸಲ್ಲಿಸಬಹುದು ಅನ್ನೋದು ಶ್ಯಾಮ್ ಸುಂದರ್ ಅವರ ವಾದವಾಗಿದೆ. ಮೇ 11 ರವರೆಗೆ ನಲಪಾಡ್ ಗೆ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಸ್ತರಿಸಿತ್ತು. ಈ ಮಧ್ಯೆಉಏ ನಲಪಾಡ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಏನಿದು ಪ್ರಕರಣ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದನು. ಫೆಬ್ರವರಿ 17ರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯಾ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.


Leave a Reply