ಮೈಸೂರು: ಮಾಜಿ ಸಚಿವ ವಿ.ಶ್ರೀನಿವಾಸ್ಪ್ರಸಾದ್ ಅಳಿಯ ಬಿಜೆಪಿ ಶಾಸಕ ಹರ್ಷವರ್ಧನ್ ಅವರು ಅಂಬೇಡ್ಕರ್ ಪುತ್ಥಳಿಗೆ ಬೇಕಾಬಿಟ್ಟಿ ಪುಷ್ಪಾರ್ಚನೆ ಮಾಡಿದ್ದಾರೆ. ಈ ಮೂಲಕ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಶಾಸಕರ ವಿರುದ್ಧ ಗರಂ ಆಗಿದಾರೆ.
ಮಾವ ಅಂಬೇಡ್ಕರ್ ಅನುಯಾಯಿ ಆದ್ರೆ ಅಳಿಯನಿಂದ ಅಂಬೇಡ್ಕರ್ಗೆ ಅವಮಾನವಾಗಿದೆ ಎಂದು ಹರ್ಷವರ್ಧನ್ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.
ಶನಿವಾರ ಮೊರಾರ್ಜಿ ದೇಸಾಯಿ ವಸತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ಹರ್ಷವರ್ಧನ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಆಗಮಿಸಿದ್ದರು. ಈ ವೇಳೆ ಅಂಬೇಡ್ಕರ್ ಪುತ್ಥಳಿಗೆ ಎಲ್ಲಾ ನಾಯಕರು ಪುಷ್ಪರ್ಚನೆ ಮಾಡಿದ್ದಾರೆ. ಆದ್ರೆ ಶಾಸಕ ಹರ್ಷವರ್ಧನ್ ಮಾತ್ರ ಬೇಕಾಬಿಟ್ಟಿಯಾಗಿ ಪುಷ್ಪರ್ಚನೆ ಮಾಡಿದ್ದಾರೆ.

ಅಂಬೇಡ್ಕರ್ ಪುತ್ಥಳಿಯನ್ನೆ ನೋಡದೇ ಪುಷ್ಪರ್ಚನೆ ಮಾಡಿ ಅವರಿಗೆ ಅವಮಾನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಸಿಟ್ಟಿಗೆದ್ದಿದ್ದು, ಹರ್ಷವರ್ಧನ್ ಅವರು ಪುತ್ಥಳಿಗೆ ಬೇಕಾಬಿಟ್ಟಿ ಪುಷ್ಪಾರ್ಚನೆ ಮಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಪುಷ್ಪಾರ್ಚನೆ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಮಾತಿಗಿಳಿದಿದ್ದ ಹರ್ಷವರ್ಧನ್ ಅವರು, ಮಾತನಾಡುತ್ತಲೇ ಹೂವುಗಳನ್ನ ಪುತ್ಥಳಿಗೆ ಎಸೆದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹರ್ಷವರ್ಧನ್ ಕ್ಷಮೆಯಾಚಿಸಬೇಕು ಎಂದು ದಲಿತ ಸಂಘಟನೆಗಳು ಆಗ್ರಹಿಸಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply