ಎಚ್‍ಡಿಕೆ ಯಾವಾಗ ಡಾಕ್ಟರ್ ಆಗಿದ್ರು- ಸುಧಾಕರ್ ಟಾಂಗ್

ಚಿಕ್ಕಬಳ್ಳಾಪುರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಯಾವಾಗ ಡಾಕ್ಟರ್ ಆಗಿದ್ದರು ಎಂದು ಶಾಸಕ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದ್ದಾರೆ.

ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಶರಣಾಗತಿ ಆಗಿರುವ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ನೀಡಿದ್ದರು. ಇದನ್ನು ಟೀಕೆ ಮಾಡಿದ್ದ ಎಚ್.ಡಿ.ಕುಮಾರಸ್ವಾಮಿ, ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥನಲ್ಲ ಎಂದು ಹೇಳಿದ್ದರು. ಈ ವಿಚಾರವಾಗಿ ಸುಧಾಕರ್ ಅವರು ಮಾಜಿ ಸಿಎಂ ವಿರುದ್ಧ ಟೀಕೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸುಧಾಕರ್, ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥನಲ್ಲ ಅಂತ ಹೇಳಿಕೆ ಕೊಡುತ್ತಿರುವ ರಾಜಕಾರಣಿಗಳು ಯಾವಾಗ ಡಾಕ್ಟರ್ ಆಗಿದ್ದರು. ಅಷ್ಟೇ ಅಲ್ಲದೆ ಅವರು ಯಾವಾಗ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್.ಎಸ್.ಎಲ್) ಎಕ್ಸ್‍ಪರ್ಟ್ ಆಗಿದ್ದರು ಅಂತ ನನಗೆ ಗೊತ್ತಿಲ್ಲ. ರಾಜ್ಯ ಸರ್ಕಾರದ ಜವಾಬ್ದಾರಿಯುತ ಗೃಹ ಸಚಿವರು ಹೇಳಿಕೆ ಕೊಟ್ಟಾಗ ಅದನ್ನು ಸ್ವೀಕರಿಸುವ ಕನಿಷ್ಠ ಜ್ಞಾನ ಇರಬೇಕು ಎಂದು ವಾಗ್ದಾಳಿ ನಡೆಸಿದರು.

ರಾಜಕೀಯವಾಗಿ ಸಾಕಷ್ಟು ನಷ್ಟ ಹೊಂದಿರುವ ಎಚ್.ಡಿ.ಕುಮಾರಸ್ವಾಮಿ ಅವರು ಹತಾಶರಾಗಿ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಹತಾಶರಾಗಿ ಮಾತನಾಡಲಿ ಆದರೆ ಪೊಲೀಸರನ್ನು ತಪ್ಪಿತಸ್ಥ ಸ್ಥಾನದಲ್ಲಿ ಬಿಂಬಿಸುವುದು ಒಳ್ಳೆಯದಲ್ಲ. ಅವರು ಸಿಎಂ ಆಗಿದ್ದಾಗ ಪೊಲೀಸರು ಒಳ್ಳೆಯವರಾಗಿದ್ದರು. ಈಗ ಅಧಿಕಾರದಿಂದ ಕೆಳಗೆ ಹೇಳಿದ ಕೂಡಲೇ ಪೊಲೀಸರು ಕೆಟ್ಟವರು ಆಗಿಬಿಟ್ಟರಾ ಎಂದು ಪ್ರಶ್ನಿಸಿ ಟಾಂಗ್ ಕೊಟ್ಟರು.

Comments

Leave a Reply

Your email address will not be published. Required fields are marked *