ಆಪ್ತ ಮಹೇಶ್ ಕುಮಟಳ್ಳಿಯನ್ನ ಬೆಂಗ್ಳೂರಿಗೆ ಕರೆಸಿಕೊಂಡ ರಮೇಶ್ ಜಾರಕಿಹೊಳಿ

ಬೆಳಗಾವಿ: ಕಳೆದ ಕೆಲವು ತಿಂಗಳಿನಿಂದ ಕಾಂಗ್ರೆಸ್‍ನಲ್ಲಿ ಬಂಡಾಯದ ಬಾವುಟ ಬೀಸುತ್ತಿರುವ ಶಾಸಕ ರಮೇಶ್ ಜಾರಕಿಹೊಳಿ ಇಂದು ಆಪ್ತ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ.

ತಂದೆ ಜಾರಿಕಿಹೊಳಿ ಸೂಚನೆಯ ಮೇರೆಗೆ ಅಮರನಾಥ್ ಜಾರಕಿಹೊಳಿ ಟಿಕೆಟ್ ಬುಕ್ ಮಾಡಿ ಮಹೇಶ್ ಕುಮಟಳ್ಳಿ ಜೊತೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬಂದಿದ್ದಾರೆ. ಸಂಜೆ ಮಹೇಶ್ ಕುಮಟಳ್ಳಿ ಮತ್ತು ರಮೇಶ್ ಜಾರಕಿಹೊಳಿ ಭೇಟಿಯಾಗಿ ತಮ್ಮ ಮುಂದಿನ ನಡೆಯ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿಯೂ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಶಾಸಕರು ಮುಗಳ್ನಗೆ ಬೀರಿ ನಮಸ್ಕರಿಸಿ ಒಳ ನಡೆದರು.

ಲೋಕಸಮರದ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಂಗಳದಲ್ಲಿ ಕ್ಷಿಪ್ರ ಬೆಳವಣಿಗೆಗಳು ಆಗುತ್ತಿವೆ. ಇಂದು ಸಂಜೆ ಅಸಮಾಧಾನಿತರೆಲ್ಲರೂ ಒಂದೆಡೆ ಸೇರಿ ಫಲಿತಾಂಶ ಮೈತ್ರಿಗೆ ವ್ಯತಿರಿಕ್ತವಾಗಿ ಬಂದಲ್ಲಿ ಅಸಮಾಧಾನಿತ ಶಾಸಕರನ್ನು ಸೆಳೆಯಲು ರಮೇಶ್ ಜಾರಕಿಹೊಳಿ ಆ್ಯಂಡ್ ಟೀಂ ಪ್ಲಾನ್ ಮಾಡಿಕೊಂಡಿದೆ ಎನ್ನಲಾಗಿದೆ.

ಇತ್ತ ಅಥಣಿ ವಿಧಾನಸಭಾ ಕ್ಷೇತ್ರದ ಜನತೆ ಕುಡಿಯುವ ನೀರಿಗಾಗಿ ಪ್ರತಿಭಟನೆ ತಾಲೂಕು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕುಡಿಯಲು ನೀರು ಕೊಡಿ ಎಂದು ಜನರು ಕೇಳುತ್ತಿರುವ ಸಂದರ್ಭದಲ್ಲಿ ಕ್ಷೇತ್ರದ ಜನತೆ ನೋವು ಕೇಳುವ ಬದಲಾಗಿ ಬೆಂಗಳೂರಿಗೆ ಪ್ರಯಾಣಿಸಿದ್ದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ.

Comments

Leave a Reply

Your email address will not be published. Required fields are marked *