ಜಿಲ್ಲೆಗೆ ಅಂಬೇಡ್ಕರ್ ಹೆಸರು ಇಡೋದನ್ನು ವಿರೋಧಿಸಿ ಪ್ರತಿಭಟನೆ – ಶಾಸಕನ ಮನೆಗೆ ಬೆಂಕಿ

BURNT

ಅಮರಾವತಿ: ಆಂಧ್ರಪ್ರೇಶದ ಕೋನಸೀಮಾ ಜಿಲ್ಲೆಯ ಮುಮ್ಮಡಿವರಂನಲ್ಲಿ ಉದ್ರಿಕ್ತಗೊಂಡ ಪ್ರತಿಭಟನಾಕಾರರು ಶಾಸಕ ಪೊನ್ನಡ ಸತೀಶ್ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ.

ಕೋನಸೀಮಾ ಜಿಲ್ಲೆಗೆ ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ನಾಮಕರಣ ಮಾಡುವುದನ್ನು ವಿರೋಧಿಸಿ ಶಾಸಕನ ಮನೆಗೆ ಬೆಂಕಿ ಹಚ್ಚಿದ್ದಾರೆ. ಸಾರಿಗೆ ಸಚಿವ ಪಿ.ವಿಶ್ವರೂಪ್ ಮನೆಗೂ ಹಾನಿಯಾಗಿದ್ದು, ಜನಪ್ರತಿನಿಧಿಗಳ ಮನೆಗಳಿಗೇ ರಕ್ಷಣೆ ನೀಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಸಾವು ಪ್ರಕರಣ – ಪತಿಗೆ 10 ವರ್ಷ ಜೈಲು, 12 ಲಕ್ಷ ದಂಡ

ಅಮಲಾಪುರಂ ಮತ್ತು ಕೋನಸೀಮಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತಾಗಿದೆ. ಮತ್ತೊಂದೆಡೆ ಜನರನ್ನು ಚದುರಿಸಲು ಅಮಲಾಪುರಂನಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಕಾರುಗಳು, ಪೀಠೋಪಕರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳು ಸೇರಿದಂತೆ ಕೆಲ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *