ಬೆಳಗಾವಿ: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಬಿಜೆಪಿ ಮುಖಂಡ ಹಾಗೂ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಂತಾಪ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅನಂತಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಅನಂತಕುಮಾರ್ ತುಂಬಾ ಆತ್ಮೀಯರಾಗಿದ್ದೇವು. ಸಾಕಷ್ಟು ಬಾರಿ ರೈಲಿನಲ್ಲಿ ಇಬ್ಬರು ಕುಳಿತು ಜೋಳದ ರೊಟ್ಟಿ ಊಟ ಸವಿಯುತ್ತಿದ್ದೇವು. ಉತ್ತರ ಕರ್ನಾಟಕದ ಬಗ್ಗೆ ಅವರು ಆತ್ಮವಿಶ್ವಾಸದ ಮಾತನಾಡುತ್ತಿದ್ದರು. ಮೊದಲು ನಮ್ಮ ಪಕ್ಷಗಳು ಬೇರೆ ಇದ್ದರು ನನ್ನ ಹಾಗೂ ಅವರ ಸ್ನೇಹ ಅಜರಾಮರ. ಅನಂತಕುಮಾರ್ ಅವರ ಅಗಲಿಕೆ ಬಿಜೆಪಿ ಪಕ್ಷಕ್ಕೆ ತುಂಬಲಾರದ ಹಾನಿಯಾಗಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನ ಒಳ್ಳೆಯ ರೀತಿಯಲ್ಲಿ ಕಟ್ಟಿದ್ದರು. ರಾಜ್ಯದ ಹೆಸರನ್ನ ರಾಷ್ಟ್ರಮಟ್ಟದಲ್ಲಿ ತಂದರು. ತನ್ನ ತಂದೆ ತಾಯಿಗೆ ಆದಂತ ಕಷ್ಟ ಬೇರೆ ಯಾರಿಗೂ ಆಗದಿರಲಿ ಎಂದು ಜೆನೆರಿಕ್ ಔಷಧಿ ಯೋಜನೆ ತಂದರು. ಆದರೆ ಅವರು ಕ್ಯಾನ್ಸರ್ ರೋಗಕ್ಕೆ ಬಲಿಯಾಗಿದ್ದು ಮಾತ್ರ ಅತೀವ ನೋವು ತಂದಿದೆ. ಅವರ ಕುಟುಂಬದ ದುಃಖದಲ್ಲಿ ನಾನು ಪಾಲ್ಗೊಳ್ಳುತ್ತೇನೆ ಎಂದರು. ಇದೇ ವೇಳೆ ಮಾಜಿ ಸಚಿವ ಶಶಿಕಾಂತ ನಾಯಕ ಕೂಡ ಅಗಲಿದ ಅನಂತಕುಮಾರ್ ಅವರಿಗೆ ಸಂತಾಪ ಸೂಚಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply