ಕೊರೊನಾ ಸೋಂಕಿತ ವೃದ್ಧೆಯ ಅಂತ್ಯಕ್ರಿಯೆ ಹೈಡ್ರಾಮಾ ಖೇದಕರ- ಖಾದರ್

ಮಂಗಳೂರು: ಕೊರೊನಾ ಸೋಂಕಿತ ವೃದ್ಧೆಯ ಅಂತ್ಯಕ್ರಿಯೆ ವೇಳೆ ನಡೆದ ಹೈಡ್ರಾಮಾ ಖೇದಕರ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ನಗರದಲ್ಲಿ ಕೊರೊನಾ ಸೋಂಕಿತ ವೃದ್ಧೆ ಶವ ಸಂಸ್ಕಾರ ವಿಚಾರದಲ್ಲಿ ನಡೆದ ಹೈಡ್ರಾಮಾ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಗುರುವಾರ ನಡೆದ ಘಟನೆ ಖೇದಕರ. ನಾಗರಿಕ ಸಮಾಜಕ್ಕೆ ಕಪ್ಪು ಚುಕ್ಕೆ. ಮೃತ ಶರೀರರದ ಜೊತೆ ಕಠೋರವಾಗಿ ವರ್ತಿಸಿ ಅಂತ ಯಾವ ಧರ್ಮವೂ ಹೇಳಿಲ್ಲ. ಶಾಸಕರೇ ಮುಂದೆ ನಿಂತು ಪ್ರತಿಭಟಿಸಿದ್ದು ಆಶ್ಚರ್ಯ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಸ್ಥಾನ ಶಾಶ್ವತವಲ್ಲ, ಮನುಷ್ಯತ್ವೇ ಮುಖ್ಯ. ಶಾಸಕರ ಮನುಷ್ಯತ್ವ ಇಲ್ಲದ ವರ್ತನೆಯನ್ನ ಖಂಡಿಸ್ತೇನೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನಡೆ ಸ್ವಾಗತಾರ್ಹ. ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊರೊನಾ ಆಕ್ಷನ್ ಪ್ಲಾನ್‍ನಲ್ಲಿ ಅಂತ್ಯ ಸಂಸ್ಕಾರದ ಬಗ್ಗೆಯೂ ಯೋಚಿಸಬೇಕು. ಆದರೆ ಜಿಲ್ಲಾಡಳಿತ ಈ ವಿಚಾರದಲ್ಲಿ ವಿಫಲವಾಗಿದೆ. ಇದು ರಾಜ್ಯದ ಬೇರೆ ಕಡೆ ಆಗಬಾರದು ಎಂದು ಹೇಳಿದರು.

ಆರೋಗ್ಯ ಸಚಿವ ಶ್ರೀರಾಮುಲು, ಕಂದಾಯ ಸಚಿವ ಆರ್.ಅಶೋಕ್ ಅವರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿ. ಗುರುವಾರ ಘಟನೆ ನಡೆದ ಬಗ್ಗೆ ಜಿಲ್ಲಾಡಳಿತ ಮತ್ತು ಇಲ್ಲಿನ ಶಾಸಕ ಭರತ್ ಶೆಯ ಬಗ್ಗೆ ಬೇಸರವಿದೆ. ಶಾಸಕರು ಮನುಷ್ಯತ್ವ ಅಳವಡಿಸಿಕೊಳ್ಳಬೇಕು. ಇದರಿಂದ ಜನರಿಗೆ ನೋವಾಗಿದೆ ಎಂದರು.

Comments

Leave a Reply

Your email address will not be published. Required fields are marked *