ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎಂ.ಸತೀಶ್ 800 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ಕೊಂಡಯ್ಯ ಹೀನಾಯ ಸೋಲನುಭವಿಸಿದ್ದಾರೆ.
ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ದಾಖಲಿಸಿದ್ದಾರೆ. ಸುಜಾ ಕುಶಾಲಪ್ಪ 705 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ 603 ಮತಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: 1,743 ಕೋಟಿ ಆಸ್ತಿಯ ಒಡೆಯ ಕೆಜಿಎಫ್ ಬಾಬುಗೆ ಸೋಲು
ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್, ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಬಾರಿಗೆ ಜಯ ಸಾಧಿಸಿದ್ದಾರೆ.

Leave a Reply