ಡಿಜಿಟಲ್ ಲಾಂಚ್-ಶಹಾಪುರ ಪದವಿ ಕಾಲೇಜು ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಮೋದಿ

ಯಾದಗಿರಿ: ರಾಜ್ಯದಲ್ಲೇ ಮೊದಲ ಬಾರಿಗೆ ಸರ್ಕಾರಿ ಪದವಿ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ವಿಡಿಯೋ ಕಾನ್ಫರೆನ್ಸ್ ನ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಲಾಂಚ್ ಮಾಡಿದ್ದಾರೆ.

ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ರಾಷ್ಟ್ರೀಯ ಉಚ್ಚತರ್ ಶಿಕ್ಷಾ ಅಭಿಯಾನದಡಿ (ಆರ್ ಯುಎಸ್‍ಎ) ಕಾಲೇಜು ಮಂಜೂರು ಆಗಿತ್ತು. ದೇಶದ ವಿವಿದ ರಾಜ್ಯಗಳಲ್ಲಿ ಯೋಜನೆ ಅಡಿ ಕಾಲೇಜು ಮಂಜೂರು ಮಾಡಲಾಗಿದ್ದು, ವೇಗವಾಗಿ ಕಟ್ಟಡ ನಿರ್ಮಾಣ ಮಾಡಿ ಕಾಲೇಜು ಆರಂಭಿಸುವ ಉದ್ದೇಶವನ್ನು ಹೊಂದಿದ್ದಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಿಗುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

ಕಾಲೇಜಿನ ಕಟ್ಟಡ ನಿರ್ಮಾಣ ಸೇರಿದಂತೆ ಯೋಜನೆ ಅಡಿ ಮೊದಲ ಭಾಗವಾಗಿ 25 ಕೋಟಿ ರೂ. ಅನುದಾನ ಲಭ್ಯವಾಗಲಿದ್ದು, 5 ರಿಂದ 6 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಎಸ್ ಮಲ್ಲೇಶಪ್ಪ, ಗುಲ್ಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ನಿರಂಜನ್ ಮತ್ತು ಜಿಲ್ಲಾಧಿಕಾರಿ ಎಂ ಕೂರ್ಮರಾವ್ ಭಾಗಿಯಾಗಿದ್ದರು. ಶಹಾಪುರದ ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾಲೇಜು ಮೂಲ ಸೌಲಭ್ಯ ಅಭಿವೃದ್ಧಿ, ಹೊಸ ಕಟ್ಟಡ ನಿರ್ಮಾಣ, ವಸತಿಗೃಹಗಳು ಸೇರಿದಂತೆ ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ರೂಸಾ 2.0 ಯೋಜನೆ ಮೂಲಕ ಆರ್ಥಿಕ ನೆರವು ನೀಡಲಾಗುತ್ತದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *