ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ವಿರುದ್ಧದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಹುಡುಗಿಯರ ಮುಂದೆ ನಡೆದ ಪ್ರತಿಷ್ಠೆಗಾಗಿ ಅಂದು ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ಘಟನೆ ನಡೆದ ನಗರದ ಫರ್ಜಿ ಕೆಫೆ ಯಲ್ಲಿ ಅಂದು ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ವಿದ್ವತ್ ಹಾಗೂ ನಲ್ಪಾಡ್ ಮತ್ತು ಆತನ ಗ್ಯಾಂಗ್ ಕಾಣಿಸಿಕೊಂಡಿತ್ತು. ಈ ಪಾರ್ಟಿ ಆರಂಭದ ಸಮಯದಿಂದ ನಲಪಾಡ್ ನನ್ನು ಆತನ ಸ್ನೇಹಿತರು “ಪ್ರಿನ್ಸ್ ಪ್ರಿನ್ಸ್” ಎಂದು ಕೂಗಿ ಪಾರ್ಟಿಯಲ್ಲಿ ನೆರೆದಿದ್ದ ಯುವಕ ಯುವತಿಯರ ಮುಂದೇ ಪ್ರತಿಷ್ಠೆ ತೋರಿಸುತ್ತಿದ್ದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತ್ತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ಅನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಹೊಡೆದಿದ್ದಾನೆ. ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು
ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ಪಾರ್ಟಿಯಲ್ಲಿ ಹಲ್ಲೆ ನಡೆಸುವ ವೇಳೆ ಸಾಕಷ್ಟು ಜನ ಅಲ್ಲಿ ನೆರೆದಿದ್ದರೂ ಯಾರು ಗಲಾಟೆ ತಡೆಯುವ ಪ್ರಯತ್ನ ನಡೆಸಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!
https://www.youtube.com/watch?v=TIPtfcxi6O4







Leave a Reply