ಮೋದಿ ಭೇಟಿಯ ಹಿಂದಿನ ರಹಸ್ಯ ಬಿಚ್ಚಿಟ್ಟ ಮೋಹನ್ ಲಾಲ್

ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಚಿತ್ರ ನಟ ಮೋಹನ್ ಲಾಲ್ ತಮ್ಮ ಭೇಟಿಯ ಕುರಿತ ಮಾಹಿತಿಯನ್ನು ತಿಳಿಸಿದ್ದಾರೆ.

ಈ ತಮ್ಮ ಫೇಸ್‍ಬುಕ್ ಖಾತೆಯಲ್ಲಿ 8 ಪುಟಗಳ ವಿವರಣೆಯುಳ್ಳ ಮಾಹಿತಿಯನ್ನು ಮೋಹನ್ ಲಾಲ್ ಪೋಸ್ಟ್ ಮಾಡಿದ್ದಾರೆ. ಮೋದಿ ಅವರೊಂದಿಗಿನ ಭೇಟಿ ಕುರಿತು ಮಾಧ್ಯಮಗಳಲ್ಲಿ ವರದಿಗಳು ಬಿತ್ತರವಾಗುತ್ತಿದೆ. ಆದರೆ ಒಬ್ಬ ಭಾರತೀಯನಾಗಿ ನಾನು ಪ್ರಧಾನಿಯನ್ನ ಯಾವಾಗ ಬೇಕಾದರು ಭೇಟಿ ಮಾಡುವುದಕ್ಕೆ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮೋದಿ ಹಾಗೂ ನನ್ನ ಭೇಟಿಯ ವೇಳೆ ಯಾವುದೇ ರಾಜಕೀಯ ಅಂಶಗಳ ಕುರಿತು ಚರ್ಚೆ ನಡೆದಿಲ್ಲ ಎಂದು ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವನ್ನು ಉಲ್ಲೇಖಿಸದೆ ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 3 ರಂದು ಪ್ರಧಾನಿ ಮೋದಿರನ್ನು ಭೇಟಿ ಮಾಡಿದ್ದ ಕುರಿತು ಸರಣಿ ಟ್ವೀಟ್ ಮಾಡಿ ಫೋಟೋ ಶೇರ್ ಮಾಡಿದ್ದರು. ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಭೇಟಿ ಮಾಡಿದ್ದೇನೆ. ಈ ವೇಳೆ ವಿಶ್ವಶಾಂತಿ ಫೌಂಡೇಶನ್ ಹಾಗೂ ನಮ್ಮ ಬಹುಮುಖಿ ಸಾಮಾಜಿಕ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ ಎಂದು ಮೋಹನ್ ಲಾಲ್ ಬರೆದುಕೊಂಡಿದ್ದರು. ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಅವರು ಗ್ಲೋಬಲ್ ಮಲಯಾಳಿ ರೌಂಡ್ ಟೇಬಲ್ ಕಾರ್ಯಕ್ರಮದಲ್ಲಿ ಭಾವಹಿಸಲು ಆಹ್ವಾನ ನೀಡಿದ್ದೇನೆ. ಪ್ರಧಾನಿ ಮೋದಿ ಕೇರಳಕ್ಕೆ ಬೇಕಾದ ಎಲ್ಲಾ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಮೋದಿ ಭಾರತ ವಿಶ್ವಶಾಂತಿ ಫೌಂಡೇಶನ್ ಅಡಿಯಲ್ಲಿ ಕ್ಯಾನ್ಸರ್ ಕೇರ್ ಸೆಂಟರ್ ಅನ್ನು ಸ್ಥಾಪಿಸುವ ನಮ್ಮ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಧಾನಿ ಮೋದಿ ಕೂಡ ಟ್ವಿಟ್ಟರ್ ನಲ್ಲಿ ಮೋಹನ್ ಲಾಲ್ ಭೇಟಿ ಕುರಿತು ಬರೆದುಕೊಂಡಿದ್ದರು. ಈ ಟ್ವೀಟ್ ಗಳ ಬೆನ್ನಲ್ಲೇ ಶೀಘ್ರವೇ ನಟ ಮೋಹನ್‍ಲಾಲ್ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Comments

Leave a Reply

Your email address will not be published. Required fields are marked *