ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟ ಮೋಹನ್‌ಲಾಲ್

ಮಾಲಿವುಡ್ ನಟ ಮೋಹನ್‌ಲಾಲ್ (Mohanlal) ಕೊಲ್ಲೂರು ಮೂಕಾಂಬಿಕೆ ದೇವಿಯ (Kollur Mookambika Temple) ದರ್ಶನ ಪಡೆದಿದ್ದಾರೆ. ಶೂಟಿಂಗ್‌ಗೆ ಬ್ರೇಕ್ ಹಾಕಿ ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದು ಮೋಹನ್‌ಲಾಲ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಾಗ ಸೆಲೆಬ್ರಿಟಿಗಳು ಭೇಟಿ ನೀಡುತ್ತಲೇ ಇರುತ್ತಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ನಟಿ ಹರ್ಷಿಕಾ ಪೂಣಚ್ಚ ವಿಶೇಷ ಪೂಜೆ ಸಲ್ಲಿಸಿದ್ದರು.


ಇದೀಗ ಮಲಯಾಳಂ (Mollywood) ಚಿತ್ರರಂಗದ ಸ್ಟಾರ್ ನಟ ಮೋಹನ್‌ಲಾಲ್ ಭೇಟಿ ನೀಡಿ, ಮುಂಜಾನೆ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ, ಅಭಿಮಾನಿಗಳು ಮೋಹನ್‌ಲಾಲ್ ಜೊತೆಗೆ ಸೆಲ್ಫಿ ತೆಗೆಯಿಸಿಕೊಳ್ಳಲು ಮುಗಿಬಿದ್ದಿದ್ದಾರೆ.

ಬರೋಜ್, ಕಣ್ಣಪ್ಪ ಸೇರಿದಂತೆ ಕನ್ನಡದ ಕೆಲವು ಪ್ರಾಜೆಕ್ಟ್‌ಗಳಲ್ಲಿ ಮೋಹನ್‌ಲಾಲ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಪುನೀತ್ ರಾಜ್‌ಕುಮಾರ್ (Puneeth Rajkumar) ನಟನೆಯ ‘ಮೈತ್ರಿ’ (Mytri Film) ಸಿನಿಮಾದಲ್ಲಿ ಮೋಹನ್‌ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.