ಅಕ್ರಮ ಹಣ ವರ್ಗಾವಣೆ ಕೇಸ್‌ – ಮಂತ್ರಿ ಗ್ರೂಪ್‌ ಎಂಡಿ ಸುಶೀಲ್ ಪಾಂಡುರಂಗ್ ಅರೆಸ್ಟ್‌

ಬೆಂಗಳೂರು: ದಕ್ಷಿಣ ಭಾರತದ ದೊಡ್ಡ ರಿಯಲ್‌ ಎಸ್ಟೇಟ್‌ ಕಂಪನಿಗಳಲ್ಲಿ ಒಂದಾಗಿರುವ ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್‌ ಪಾಂಡುರಂಗ್‌ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್‌ಗೆ ಹಾಜರು ಪಡಿಸಿದರು. ಕೋರ್ಟ್‌ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.

ಏನಿದು ಪ್ರಕರಣ?
ಜನರಿಂದ ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರು ಇಡಿಗೂ ದೂರು ನೀಡಿದ್ದರು. ಇದನ್ನೂ ಓದಿ: ವಿಷಕಂಠನಂತೆ ಮೋದಿ 19 ವರ್ಷಗಳಿಂದ ಗುಜರಾತ್ ಗಲಭೆ ನೋವನ್ನು ಸಹಿಸಿಕೊಂಡಿದ್ದಾರೆ: ಅಮಿತ್ ಶಾ

ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್‌ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಪತ್ತೆಯಾಗಿತ್ತು. ಐಟಿ ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಅಷ್ಟೇ ಅಲ್ಲದೇ ಹವಾಲ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಅನುಮಾನ ಬಂದಿತ್ತು.

ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್‌ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಅ ಹಣದ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿಯಾಗಿತ್ತು.

Live Tv

Comments

Leave a Reply

Your email address will not be published. Required fields are marked *