ಮುಂಗಾರು ಮಳೆ – ಜೂನ್ 25ರ ವರೆಗೆ ರೆಡ್ ಅಲರ್ಟ್ ಘೋಷಣೆ

weather

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸುತ್ತಿದ್ದಾನೆ.

ಕಾರವಾರದ ರೈಲ್ವೆ ನಿಲ್ದಾಣ ರಸ್ತೆ, ಹಬ್ಬುವಾಡ, ಸೋನಾರವಾಡ, ಸಾಯಿಬಾಬಾ ಮಂದಿರ ರಸ್ತೆಗಳು ಜಲಾವೃತವಾಗಿ ಜನ ಪರದಾಡಿದ್ರು. ಮನೆಗಳಿಗೆ ನೀರು ನುಗ್ಗಿದ್ದಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆಯು ಸಹ ವರುಣನ ರೌದ್ರಾವತಾರ ಮುಂದುವರಿಯಲಿದ್ದು, ಜೂನ್ 25ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಸ್ಥಳೀಯರು, ಪ್ರವಾಸಿಗರು ನದಿ ಹಾಗೂ ಸಮುದ್ರದಲ್ಲಿ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಕೋಲಾರ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು: ದೇವೇಗೌಡರ ಪತ್ರ

ಸಾಂದರ್ಭಿಕ ಚಿತ್ರ

ಇನ್ನು ಚಿಕ್ಕಮಗಳೂರಿನ ಕಳಸಾ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ವಾರದ ಹಿಂದಷ್ಟೇ 30 ಲಕ್ಷ ವೆಚ್ಚದಲ್ಲಿ ನಿರ್ಮಿಸಿ ಉದ್ಘಾಟನೆಗೊಂಡಿದ್ದ ಸೇತುವೆ ಕುಸಿದುಬಿದ್ದಿದೆ. ಪಿಕಪ್ ವಾಹನ ಹೋಗುತ್ತಿದ್ದಾಗ ಕಾಂಕ್ರಿಟ್ ಗೋಡೆ ಕಳಚಿಬಿದ್ದಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಮಹಿಳಾ ಪೊಲೀಸರಿಗೆ ಕ್ಯಾಕರಿಸಿ ಉಗಿದು ಕೈ ನಾಯಕಿ ನೆಟ್ಟಾ ಡಿಸೋಜಾ ಆಕ್ರೋಶ 

ಅಂದ ಹಾಗೇ ಈ ಸೇತುವೆಯನ್ನು 30 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಇತ್ತ ಈಗಿರುವ NDRF ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ, ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Live Tv

Comments

Leave a Reply

Your email address will not be published. Required fields are marked *