ಕೋಲಾರ: ದೇವಾಲಯದಲ್ಲಿ ವಿತರಿಸಿದ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೀಗರಾಯನಹಳ್ಳಿಯಲ್ಲಿ ನಡೆದಿದೆ.
ಹಳ್ಳಿಯ ಗಂಗಮ್ಮ ದೇವಾಲಯದಲ್ಲಿ ಶನಿವಾರ ಹೊಸ ವರ್ಷಾಚರಣೆಯ ಅಂಗವಾಗಿ ವಿಶೇಷ ಪೂಜೆ ನಡೆದಿತ್ತು. ನಂತರದಲ್ಲಿ ದೇವಾಲಯದ ಆಡಳಿತ ಮಂಡಳಿ ಮಾಡಿಸಿದ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಗಿದೆ.
ಪ್ರಸಾದದ ರೂಪದಲ್ಲಿ ಚಿತ್ರಾನ್ನ ಹಾಗೂ ಕೇಸರಿಬಾತ್ ಸೇವಿಸಿದ ಭಕ್ತರು ಅಸ್ವಸ್ಥಗೊಂಡಿದ್ದಾರೆ. 50ಕ್ಕೂ ಹೆಚ್ಚು ಜನರನ್ನು ಶ್ರೀನಿವಾಸಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 10 ರೂಪಾಯಿ ಕೋಳಿ ಮರಿಗೆ 52 ರೂ. ಟಿಕೆಟ್!

ಅಸ್ವಸ್ಥತರ ಪೈಕಿ 12 ಜನ ಮಕ್ಕಳು, 30 ಕ್ಕೂ ಹೆಚ್ಚು ಜನ ಪುರುಷರು ಹಾಗೂ ಮಹಿಳೆಯರು ಇದ್ದಾರೆ. ಈಗಾಗಲೇ ಭಕ್ತರು ಗುಣಮುಖರಾಗಿ ಮನೆಗಳತ್ತ ತೆರಳುತ್ತಿದ್ದಾರೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮೂರು ತಿಂಗಳ ಬಳಿಕ ಸಾವಿರ ಸೋಂಕು – ಬೆಂಗ್ಳೂರಲ್ಲಿ 810 ಕೇಸ್

Leave a Reply