ಅತೀ ಹೆಚ್ಚು ಸುಳ್ಳು ಹೇಳೋ ಪ್ರಧಾನಿ ಅಂದ್ರೆ ಅದು ಮಿಸ್ಟರ್ ಮೋದಿ: ಸಿದ್ದರಾಮಯ್ಯ

ಗದಗ: ಅತೀ ಹೆಚ್ಚು ಸುಳ್ಳು ಹೇಳುವ ಪ್ರಧಾನಿಯಂದು ಗುರುತಿಸಿಕೊಂಡವರು ಮಿಸ್ಟರ್ ನರೇಂದ್ರ ಮೋದಿಯವರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮೋದಿಯವರು ಅಚ್ಛೇ ದಿನ್ ಆಯೇಗಾ, ಆಯೇಗಾ ಎಂದು ಹೇಳುತ್ತಲೇ ಇದ್ದಾರೆ. ಆದರೆ ಇಂದು ತೈಲಬೆಲೆಗಳು ಗಗನಕ್ಕೇರಿದೆ. ಇದಕ್ಕೆ ಅವರು ಅಚ್ಛೇ ದಿನ್ ಎಂದು ಕರೆಯುತ್ತಾರಾ? ಅತೀ ಹೆಚ್ಚು ಸುಳ್ಳು ಹೇಳುವ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರೇ ಮೊದಲಿಗರು. ಹೀಗಾಗಿ ನಾವೆಲ್ಲ ನರೇಂದ್ರ ಮೋದಿ ಹಠಾವೋ, ದೇಶ್ ಬಚಾವೋ, ಬಿಜೆಪಿ ಹಠಾವೋ, ದೇಶ್ ಬಚಾವೋ ಎಂದು ಮೋದಿ ಶೈಲಿಯಲ್ಲೇ ಟಾಂಗ್ ನೀಡಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವುದು ಖಚಿತ. ಅಷ್ಟೇ ಅಲ್ಲದೇ ಎಐಸಿಸಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರು ಮುಂದಿನ ಪ್ರಧಾನಿಗಳಾಗುತ್ತಾರೆಂದು ಭವಿಷ್ಯ ನುಡಿದರು.

ನಂತರ ಶಾಸಕ ಎಚ್.ಕೆ ಪಾಟೀಲ್ ಮಾತನಾಡಿ, ಸಿದ್ದರಾಮಯ್ಯರನ್ನು ಕಂಡರೆ ಪ್ರಧಾನಿ ಮೋದಿ ಗಢಗಢ ಅನ್ನುತ್ತಿದ್ದಾರೆ. ಅಲ್ಲದೇ ಅವರ ಕಣ್ಣು ನಮ್ಮ ಸಿದ್ದರಾಮಯ್ಯನವರ ಮೇಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಬಿರುಗಾಳಿ ಬೀಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾಷಣಕ್ಕೂ ಮುನ್ನ ಸಿದ್ದರಾಮಯ್ಯನವರು ಮಾಜಿ ಶಾಸಕ ಜಿ.ಎಸ್.ಪಾಟೀಲ್ ಅವರನ್ನು ಗದಗ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ, ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕರು ಸೇರಿದಂತೆ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *