ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಳಗಾನೂರ ಕ್ರಾಸ್ ಬಳಿ 108 ಅಂಬುಲೆನ್ಸ್ ನಲ್ಲಿಯೇ ಗರ್ಭಿಣಿಗೆ ಹೆರಿಗೆಯಾಗಿದೆ.
ಮುದ್ದೇಬಿಹಾಳ ತಾಲೂಕಿನ ಬಿಳೇಭಾವಿ ಗ್ರಾಮದ ಬಸಮ್ಮಾ ನಿಂಗಪ್ಪ ಕೆಸರಟ್ಟಿಗೆ 108 ನಲ್ಲಿ ಹೆರಿಗೆ ಆಗಿದೆ. 108 ವಾಹನದ ಸಿಬ್ಬಂದಿ ಸಮಯೋಚಿತ ಚಿಕಿತ್ಸೆಯಿಂದಾಗಿ ಸುಸೂತ್ರ ಹೆರಿಗೆ ಆಗಿದೆ. ತಾಯಿ ಬಸಮ್ಮ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಮೊದಲು ಗರ್ಭಿಣಿಯನ್ನು ತಾಳಿಕೋಟೆ ಸರ್ಕಾರಿ ಸಮುದಾಯ ಆರೊಗ್ಯ ಕೇಂದ್ರಕ್ಕೆ ಕರೆ ತರಲಾಗಿತ್ತು. ಆದರೆ ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂಬ ಕಾರಣದಿಂದ ಗರ್ಭಿಣಿಯನ್ನು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆ ಅಥವಾ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದರು. ಆಗ ಮಾರ್ಗ ಮಧ್ಯದಲ್ಲಿಯೇ ಬಳಗಾನೂರ ಕ್ರಾಸ್ ಬಳಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹೆರಿಗೆ ಆಗಿದೆ.
ಸದ್ಯಕ್ಕೆ ತಾಯಿ ಮತ್ತು ಮಗುವಿನ ಆರೋಗ್ಯ ಸ್ಥಿರವಾಗಿದೆ. ಹೆರಿಗೆ ಬಳಿಕ ತಾಳಿಕೋಟೆ ಸಮುದಾಯ ಕೇಂದ್ರದಲ್ಲಿ ಬಾಣಂತಿ ಹಾಗೂ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply