ರಾಹುಲ್ ತಾಯಿ ಮಗನಲ್ಲ, ಮಮ್ಮಿ ಮಗನಾದ್ರಿಂದ ಅನುಭವದ ಕೊರತೆ ಇದೆ: ಸಂಸದ ಸುರೇಶ್ ಅಂಗಡಿ

ಬಾಗಲಕೋಟೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಾಯಿ ಮಗ ಅಲ್ಲ, ಮಮ್ಮಿ ಮಗ ಆದ್ದರಿಂದ ಅನುಭವದ ಕೊರತೆ ಇದೆ ಎಂದು ಸಂಸದ ಸುರೇಶ್ ಅಂಗಡಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಅನುಭವ ಕಡಿಮೆ ಇದೆ. ಅವರು ತಾಯಿಯ ಮಗ, ಅಲ್ಲ ಮಮ್ಮಿಯ ಮಗನೆಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಸರ್ಕಾರ ಮನೆಯೊಂದು ಮೂರು ಬಾಗಿಲು ಆಗಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಮತ್ತು ಸಿದ್ದರಾಮಯ್ಯ ಒಂದೊಂದು ದಿಕ್ಕಿನಲ್ಲಿ ಇದ್ದಾರೆ. ಹಣದ ಕೊರತೆಯಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಲೋಕಸಭೆಯಲ್ಲಿ ರಾಹುಲ್ ಗಾಂಧಿಯವರ ವರ್ತನೆಯ ವಿರುದ್ಧ ಹಕ್ಕುಚ್ಯುತಿಗಾಗಿ ಸಂಸದ ಪ್ರಹ್ಲಾದ್ ಜೋಶಿಯವರು ಈಗಾಗಲೇ ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಲೋಕಸಭಾಧ್ಯಕ್ಷರು ನಾಳೆ ನಿರ್ಧಾರ ಕೈಗೊಳ್ಳಲಿದ್ದಾರೆ. ಅಲ್ಲದೇ ನನಗೂ ಐ ಫೋನ್ ಗಿಫ್ಟ್ ಬಂದಿದ್ದು, ಶೀಘ್ರದಲ್ಲಿಯೇ ವಾಪಸ್ ಮಾಡುತ್ತೇನೆ ಎಂದು ಹೇಳಿದರು.

ಮುಂದಿನ ಭಾರೀ ಲೋಕಸಭೆ ಚುನಾವಣೆಗೆ ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಇಲ್ಲ ಬೇರೆಯಾರಿಗಾದರೂ ಟಿಕೆಟ್ ಕೊಟ್ಟರೆ ಅವರ ಪರ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಸಂಸದ ಸುರೇಶ್ ಅಂಗಡಿ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *