ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಕಾಲಿಗೆ ಚಪ್ಪಲಿ ತೊಡಿಸಿದ ಧೋನಿ

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ.

ಹೌದು, ಟೀಂ ಇಂಡಿಯಾದ ಮಾಜಿ ನಾಯಕನಾದರು ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸಿ ಮೂಲಕ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ ಹಾಕುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಪತ್ನಿ ಸಾಕ್ಷಿ ಧೋನಿ ಸ್ವತಃ ಈ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, `ನೀವು ಚಪ್ಪಲಿಗಳಿಗೆ ಹಣ ಕೊಟ್ಟಿದ್ದೀರಿ, ಆದ್ದರಿಂದ ನೀವೇ ತೊಡಿಸಿ’ ಎಂದು ಬರೆದುಕೊಂಡಿದ್ದಾರೆ.

https://www.instagram.com/p/BrasZHVFmZy/

ಸದ್ಯ ಆಸೀಸ್ ಟೂರ್ನಿಯಿಂದ ಹೊರಗುಳಿದಿರುವ ಧೋನಿ ಬಿಡುವಿನ ವೇಳೆಯನ್ನು ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಜನವರಿಯಿಂದ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಲಿರುವ ಏಕದಿನ ಟೂರ್ನಿಯಲ್ಲಿ ಧೋನಿ ಭಾಗವಹಿಸಲಿದ್ದಾರೆ. ಕ್ರಿಕೆಟ್ ಹೊರತಾಗಿಯೂ ಅಭಿಮಾನಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವ ಧೋನಿ, ಸಾಮಾಜಿಕ ಜಾಲತಾಣದಲ್ಲಿ ಕುಟುಂಬದೊಂದಿಗಿನ ಸಂತಸದ ಕ್ಷಣಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಕುಟುಂಬ ಸಮೇತ ಮುಖೇಶ್ ಅಂಬಾನಿ ಮಗಳ ಮದುವೆಯಲ್ಲಿ ಧೋನಿ ಭಾಗವಹಿಸಿದ್ದರು. ಈ ವೇಳೆ ಟೀಂ ಇಂಡಿಯಾ ವೇಗಿ ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಕ್ರಿಕೆಟಿಗರು ಭಾಗವಹಿಸಿದ್ದರು. ಇದನ್ನು ಓದಿ: ಮಗಳು ಹೇಳಿದಂತೆ ಹೆಜ್ಜೆ ಹಾಕಿದ ಧೋನಿ- ವಿಡಿಯೋ ವೈರಲ್ 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

Comments

Leave a Reply

Your email address will not be published. Required fields are marked *