ಜಿನ್ನಾ ದೇಶದ ಸ್ವಾತಂತ್ರ್ಯ, ಅಭಿವೃದ್ಧಿಯಲ್ಲಿ ಪಾತ್ರ ವಹಿಸಿದ್ದರು : ಶತ್ರುಘ್ನ ಸಿನ್ಹಾ

ಭೋಪಾಲ್: ಮೊಹಮ್ಮದ್ ಅಲಿ ಜಿನ್ನಾ ಅವರು ದೇಶದ ಸ್ವಾತಂತ್ರ್ಯ ಹಾಗೂ ಅಭಿವೃದ್ಧಿಯಲ್ಲಿ ಪಾತ್ರ ವಹಿಸಿದ್ದರು ಎಂದು ನಟ, ಕಾಂಗ್ರೆಸ್ ಮುಖಂಡ ಶತ್ರಘ್ನ ಸಿನ್ಹಾ ಹೇಳಿದ್ದಾರೆ.

ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ಸೌಸರ್ ನಲ್ಲಿ ನಡೆದ ಪ್ರಚಾರ ವೇಳೆ ಮಾತನಾಡಿ ಅವರು, ಕಾಂಗ್ರೆಸ್ ಪರಿವಾರವನ್ನು ಮಹಾತ್ಮ ಗಾಂಧಿ ನಡೆಸಿದರು. ಅವರ ಬಳಿಕ ಸರ್ದಾರ್ ವಲ್ಲಭಭಾಯಿ ಪಟೇಲ್, ಮೊಹಮ್ಮದ್ ಅಲಿ ಜಿನ್ನಾ, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಈಗ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ದೇಶದ ಸ್ವಾತಂತ್ರ್ಯ ಹಾಗೂ ಅಭಿವೃದ್ಧಿ ಶ್ರಮಿಸಿದ್ದಾರೆ. ಹೀಗಾಗಿ ನಾನು ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇನೆ ಎಂದರು.

ಮೊಹಮ್ಮದ್ ಅಲಿ ಜಿನ್ನಾ ಫೋಟೋ ವಿಚಾರವಾಗಿ ಉತ್ತರ ಪ್ರದೇಶದ ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಗಲಾಟೆ ನಡೆದಿತ್ತು.

ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಜಿನ್ನಾ ಫೋಟೋವನ್ನು 2018ರ ಮೇನಲ್ಲಿ ಪ್ರದರ್ಶಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಆದರೆ ಇದನ್ನು ಸಮರ್ಥಿಸಿಕೊಂಡಿದ್ದ ವಿವಿ ವಕ್ತಾರ ಶಫಿ ಕಿದ್ವಾಯಿ, ಜಿನ್ನಾ ಫೋಟೋ ದಶಕಗಳಿಂದಲೂ ವಿಶ್ವವಿದ್ಯಾಲಯಲ್ಲಿದೆ. ಜಿನ್ನಾ ಈ ವಿಶ್ವವಿದ್ಯಾಲಯದ ಸಂಸ್ಥಾಪಕರು ಮತ್ತು ವಿದ್ಯಾರ್ಥಿ ಸಂಘಟನೆಯ ಖಾಯಂ ಸದಸ್ಯರು. ಹೀಗಾಗಿ ಖಾಯಂ ಸದಸ್ಯತ್ವ ಹೊಂದಿದ ಮಹಾತ್ಮ ಗಾಂಧಿ, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಜಿನ್ನಾ ಸೇರಿದಂತೆ ಅನೇಕ ಫೋಟೋ ಪ್ರದರ್ಶನ ಮಾಡಲಾಗಿದೆ ಎಂದು ತಿಳಿಸಿದ್ದರು.

Comments

Leave a Reply

Your email address will not be published. Required fields are marked *