ನವದೆಹಲಿ: 2008ರಲ್ಲಿ ನಡೆದ ಮುಂಬೈ ಭಯೋತ್ಪಾಧಕರ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಲಷ್ಕರ್-ಎ-ತೈಬಾ(ಎಲ್‌ಇಟಿ) ಸಂಸ್ಥಾಪಕ ಹಫೀಜ್ ಸಯೀದ್ ಪುತ್ರ ಹಫೀಜ್ ತಲ್ಹಾ ಸಯೀದ್‌ನನ್ನು ಸರ್ಕಾರ ಭಯೋತ್ಪಾದಕ ಎಂದು ಘೋಷಿಸಿದೆ.
ಹಫೀಸ್ ತಲ್ಹಾ ಸಯೀದ್ ಭಾರತದಲ್ಲಿ ಲಷ್ಕರ್-ಎ-ತೈಬಾ ಹಾಗೂ ಭಯೋತ್ಪಾದನೆಗೆ ನೇಮಕಾತಿ, ನಿಧಿ ಸಂಗ್ರಹ ಹಾಗೂ ಯೋಜನೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಎಂದು ಕೇಂದ್ರ ಗೃಹಸಚಿವಾಲಯ ತಿಳಿಸಿದೆ.
ತಲ್ಹಾ ಸಯೀದ್ ಪಾಕಿಸ್ತಾನದಾದ್ಯಂತ ವಿವಿಧ ಎಲ್‌ಇಟಿ ಕೇಂದ್ರಗಳಿಗೆ ಆಗಾಗ ಭೇಟಿ ನೀಡುತ್ತಿದ್ದು, ಭಾರತ, ಇಸ್ರೇಲ್, ಅಮೇರಿಕಾ ಹಾಗೂ ಇತರ ಪಾಶ್ಚಿಮಾತ್ಯ ದೇಶಗಳಲ್ಲಿ ಭಾರತೀಯ ಹಿತಾಸಕ್ತಿಗಳ ವಿರುದ್ಧ ಜಿಹಾದ್ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಎಂದು ಹೇಳಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

ಹಫೀಜ್ ಸಯೀದ್ ನೇತೃತ್ವದಲ್ಲಿ 2008ರ ನವೆಂಬರ್ 26 ರಂದು ನಡೆದ ಮುಂಬೈನ ಭೀಕರ ಭಯೋತ್ಪಾದನಾ ದಾಳಿಯಲ್ಲಿ 166 ಜನರು ಸಾವನ್ನಪ್ಪಿದ್ದರು. ಕೆಲವು ವರ್ಷಗಳ ಹಿಂದೆಯೇ ಆತನನ್ನು ಭಯೋತ್ಪಾದಕ ಎಂದು ಸರ್ಕಾರ ಘೋಷಿಸಿದ್ದು, ಈ ಆರೋಪದ ಮೇಲೆ ಆತ ಪಾಕಿಸ್ತಾನದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಇದನ್ನೂ ಓದಿ: ಭಾರತವನ್ನು ಹೊಗಳಿದ ಇಮ್ರಾನ್ ಖಾನ್‍ಗೆ ಪಾಕ್ ಬಿಟ್ಟು ತೊರೆಯಿರಿ ಎಂದ ಷರೀಫ್ ಪುತ್ರಿ
ಭಾರತ ಸತತವಾಗಿ ಹಫೀಜ್ ಸಯೀದ್‌ನನ್ನು ಕಸ್ಟಡಿಗೆ ಕೋರುತ್ತಿದೆ. ಆದರೆ ಪಾಕಿಸ್ತಾನ ಅದನ್ನು ನಿರಾಕರಿಸಿದೆ.

Leave a Reply