ಕಲಬುರಗಿ: ಸೆಪ್ಟಂಬರ್ 3ರಂದು ನಡೆಯಲಿರುವ ರಾಜ್ಯದ ಮೂರು ಮಹಾನಗರಪಾಲಿಕೆಗಳ ಚುನಾವಣೆಯಲ್ಲಿ ಆಡಳಿತರೂಢ ನಮ್ಮ ಪಕ್ಷ ಅಧಿಕಾರ ಚುಕ್ಕಾ ಹಿಡಿಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

ಕಲಬುರಗಿ, ಬೆಳಗಾವಿ, ಹುಬ್ಬಳಿ-ಧಾರವಾಡ ಈ ಮೂರು ಮಹಾನಗರ ಪಾಲಿಕೆಗಳು ಬಿಜೆಪಿ ತೆಕ್ಕೆಗೆ ಬರಲಿದೆ. ಒಳ್ಳೆಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಅದರಲ್ಲೂ ಕಲಬುರಗಿಯಲ್ಲಿ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾಲಿಕೆಯ ಅತೀ ಹೆಚ್ಚು ವಾರ್ಡ್ ಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಭರವಸೆ ವ್ಯಕ್ತಪಡಿಸಿದರು.

ಈಗಾಗಲೇ ನಮ್ಮ ಪಕ್ಷವು ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದು, ನಾಳೆ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತದೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೊಟ್ಟಿದೆ. ಹೀಗಾಗಿ ಜನರು ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಅವಧಿ ಪೂರ್ಣ ಮಾಡಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಕಟೀಲ್ ಅವರು, ಸಿದ್ದರಾಮಯ್ಯನವರು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಇರೋದು ಕನ್ಫರ್ಮ್ ಆಗಿದೆ. ಹಾಗಾಗಿ ಸಿದ್ದರಾಮಯ್ಯ ಜೋತಿಷ್ಯ ಹೇಳೋದಕ್ಕೆ ಮುಂದಾಗಿದ್ದಾರೆ ಎಂದು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ನಮ್ಮ ಸೈನಿಕರ ಮೇಲೆ ದಾಳಿಯಾದ ಮರು ಕ್ಷಣವೇ ಪ್ರತಿದಾಳಿ – ಅಮೆರಿಕ ಅಧ್ಯಕ್ಷ ಬೈಡನ್ ಎಚ್ಚರಿಕೆ

ಇತ್ತ ಈಗಾಗಲೇ ಅತೃಪ್ತ ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆಯುತ್ತಿದ್ದಾರೆ. ಇಂದು ಬಿಜೆಪಿ ಮಾಜಿ ಪಾಲಿಕೆ ಸದಸ್ಯ ಬಸವರಾಜ ನಾಶಿ ಅವರು ಕಾಂಗ್ರೆಸ್ ಸೇರುವ ಮೂಲಕ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿದಂತಾಗಿದೆ. ಟಿಕೆಟ್ ಸಿಗದ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿರುವ ಬಗ್ಗೆ ಸುಳಿವು ಲಭ್ಯವಾಗಿದೆ. ಇದನ್ನೂ ಓದಿ: ಇಡಿ ಬುಲಾವ್ -ದೆಹಲಿಗೆ ತೆರಳಿದ ಜಮೀರ್ ಅಹ್ಮದ್ ಖಾನ್!

Leave a Reply