ಮಹಿಳಾ ಹಾಸ್ಟೆಲ್‌ನಲ್ಲಿ ಯುವತಿಯ ಕೊಲೆ- ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆ

ಮುಂಬೈ: ಮಹಿಳಾ ಹಾಸ್ಟೆಲ್‌ನಲ್ಲಿ (Womens Hostel) 18 ವರ್ಷದ ಯುವತಿಯನ್ನು ಹತ್ಯೆಗೈದ (Murder) ಬಳಿಕ ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆಯಾದ ಘಟನೆ ದಕ್ಷಿಣ ಮುಂಬೈನ (Mumbai) ಚರ್ಚ್ ಗೇಟ್ (Church Gate) ಪ್ರದೇಶದಲ್ಲಿ ನಡೆದಿದೆ.

ಕೊಲೆಯಾದ ಯುವತಿ ಬಾಂದ್ರಾದ ಉಪನಗರದ ಸರ್ಕಾರಿ ಪಾಲಿಟೆಕ್ನಿಕ್‌ನ ವಿದ್ಯಾರ್ಥಿನಿಯಾಗಿದ್ದು, ಮೆರೈನ್ ಡ್ರೈವ್‌ನ (Marine Drive) ಮಹಿಳಾ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಕೋಣೆಗೆ ಹೊರಗಿನಿಂದ ಬೀಗ ಹಾಕಿದ್ದು, ಆಕೆ ಹೊರಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೀಗ ಒಡೆದು ಕೋಣೆಯೊಳಗೆ ನುಗ್ಗಿದಾಗ ದುಪ್ಪಟ್ಟ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಯುವತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಜಾರ್ಖಂಡ್‍ನಲ್ಲಿ ತಪ್ಪಿತ್ತು ರೈಲು ದುರಂತ!

ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ನಂತರ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸತ್ಯಾಂಶ ಗೊತ್ತಾಗಲಿದೆ. ಶೀಘ್ರವೇ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು. ಘಟನೆಯ ನಂತರ ಅದೇ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೋರ್ವ ತಲೆಮರೆಸಿಕೊಂಡಿದ್ದು, ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ಇದನ್ನೂ ಓದಿ: ಮಣಿಪುರದಲ್ಲಿ ಕುಕಿ ದಂಗೆಕೋರರೊಂದಿಗೆ ಬಿಎಸ್‌ಎಫ್ ಗುಂಡಿನ ಚಕಮಕಿ – ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

ಮೆರೈನ್ ಡ್ರೈವ್‌ನ ಮಹಿಳಾ ಹಾಸ್ಟೆಲ್‌ನಲ್ಲಿ 18 ವರ್ಷದ ಯುವತಿಯನ್ನು ಹತ್ಯೆಗೈದ ಆರೋಪದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ರೈಲ್ವೆ ಹಳಿ ಬಳಿ ಶವವನ್ನು ಪತ್ತೆ ಮಾಡಿದ್ದಾರೆ. ಆರೋಪಿಯನ್ನು ಅದೇ ಹಾಸ್ಟೆಲ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಕನೋಜಿಯಾ ಎಂದು ಗುರುತಿಸಲಾಗಿದೆ. ಮುಂಬೈನ ಮರೈನ್ ‌ಡ್ರೈವ್ ಪಿಎಸ್ ಆತನ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಭಯೋತ್ಪಾದಕರ ಭೀತಿ- ಭದ್ರತಾ ಪಡೆಗಳೇ ಟಾರ್ಗೆಟ್