ಎದೆ ಮೇಲೆ ಯೋಗಿ ಟ್ಯಾಟೂ ಹಾಕಿಸಿಕೊಂಡ ಮುಸ್ಲಿಂ ಫ್ಯಾನ್

ಲಕ್ನೋ: ಮುಸ್ಲಿಂ ಯುವಕನೊಬ್ಬ ತನ್ನ ಎದೆಯ ಮೇಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಟ್ಯಾಟೂ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾರೆ.

ಯಮೀನ್ ಸಿದ್ದಿಕಿ(23) ಮುಸ್ಲಿಂ ಯುವಕ. ಸಿದ್ದಿಕಿ ಫರೂಕಾಬಾದ್ ಮತ್ತು ಮೈನ್‍ಪುರಿ ಜಿಲ್ಲೆಗಳ ಗಡಿಯಲ್ಲಿರುವ ಹಳ್ಳಿಯ ನಿವಾಸಿಯಾಗಿದ್ದಾರೆ. ಇಲ್ಲಿ ಪಾದರಕ್ಷೆಗಳ ವ್ಯಾಪಾರಿಯಾಗಿದ್ದಾರೆ. ಯೋಗಿ ಆದಿತ್ಯನಾಥ್ ತನ್ನ ರೋಲ್ ಮಾಡೆಲ್ ಹೇಳಿರುವ ಆತ ಯೋಗಿ ಆದಿತ್ಯನಾಥ್ ಅವರ ಜನ್ಮದಿನದ ಪ್ರಯುಕ್ತ ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿದ್ದಿಕಿ, ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಅವರಿಗೆ ಟ್ಯಾಟೂ ತೋರಿಸಬೇಕೆಂಬುದು ಆಸೆ ಆಗಿದೆ. ಅವರ ಬಗ್ಗೆ ನನಗೆ ಅಪಾರ ಪ್ರೀತಿ ಮತ್ತು ಗೌರವವಿದೆ. ಅವರು ಅಧಿಕಾರಕ್ಕೆ ಬಂದಾಗಿನಿಂದ ಉತ್ತರ ಪ್ರದೇಶವನ್ನು ಬದಲಾಯಿಸಿದ್ದಾರೆ. ಯಾವುದೇ ತಾರತಮ್ಯವಿಲ್ಲದೇ ಹಿಂದೂ ಮತ್ತು ಮುಸ್ಲಿಮರು ಎಲ್ಲಾ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: 1.5 ವರ್ಷದಲ್ಲಿ 10 ಲಕ್ಷ ಮಂದಿಗೆ ಉದ್ಯೋಗ ನೀಡಲು ಮುಂದಾದ ಮೋದಿ ಸರ್ಕಾರ

ಇದೇ ವೇಳೆ ಜ್ಞಾನವಾಪಿ ಮಸೀದಿ ಮತ್ತು ಮಥುರಾ ಈದ್ಗಾದಂತಹ ವಿವಾದಾತ್ಮಕ ವಿಷಯಗಳ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು ನ್ಯಾಯಾಲಯ ನಿರ್ಧರಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ತಾಳಿ ಕಟ್ಟಿದ ಗಂಡನನ್ನೇ ಕೊಂದ್ಲು – ಅಪಘಾತ ಅಂತ ಬಿಂಬಿಸಲು ಹೋಗಿ ಸಿಕ್ಕಿ ಬಿದ್ಲು

Comments

Leave a Reply

Your email address will not be published. Required fields are marked *