ಅಲ್ತಾಫ್‌ನನ್ನು ಮುಸ್ಲಿಂ ಸಮುದಾಯದಿಂದ ಬಹಿಷ್ಕರಿಸಲು ತೀರ್ಮಾನ: ಮುಸ್ಲಿಂ ಮುಖಂಡ

– ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ ಖಂಡಿಸಿದ ಮೊಹಮ್ಮದ್ ಶರೀಫ್

ಉಡುಪಿ: ಅತ್ಯಾಚಾರ ಆರೋಪಿ ಅಲ್ತಾಫ್‌ನನ್ನು (Althaf) ಮುಸ್ಲಿಂ ಸಮುದಾಯದಿಂದ ಬಹಿಷ್ಕಾರ ಮಾಡಲು ತೀರ್ಮಾನಿಸಲಾಗಿದೆ ಎಂದು ಕಾರ್ಕಳದ ಮುಸ್ಲಿಂ ಮುಖಂಡ ಮೊಹಮ್ಮದ್ ಶರೀಫ್ ತಿಳಿಸಿದ್ದಾರೆ.

‘ಪಬ್ಲಿಕ್ ಟಿವಿ’ಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಮಾನವ ಸಮುದಾಯದ ಮೇಲೆ ನಡೆದ ದುಷ್ಕೃತ್ಯ. ಮುಸಲ್ಮಾನ ಸಮುದಾಯ ಈ ಘಟನೆಯನ್ನು ಖಂಡಿಸುತ್ತದೆ. ಕರಾವಳಿಯಲ್ಲಿ ಡ್ರಗ್ ಜಾಲ ಬಹಳ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ. ಯುವತಿಯ ಜೊತೆ ಅಮಾನವೀಯವಾಗಿ ವರ್ತನೆ ಮಾಡಿದ್ದಾರೆ. ಆರೋಪಿ ಯುವಕ ಮೂಲತಃ ಕಾರ್ಕಳದವನಲ್ಲ. ಈ ಹಿಂದೆ ಕೂಡ ಇಂತಹ ಬೇರೆ ಬೇರೆ ಪ್ರಕರಣಗಳು ಆತನ ಮೇಲೆ ಇತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾರ್ಕಳ ಅತ್ಯಾಚಾರ ಪ್ರಕರಣ- ಆರೋಪಿಗಳು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ

ಆರೋಪಿ ಅಲ್ತಾಫ್‌ನನ್ನು ಮುಸ್ಲಿಂ ಸಮುದಾಯದಿಂದ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದೇವೆ. ಇಂತಹ ಕೃತ್ಯಗಳಿಗೆ ಮುಸ್ಲಿಂ ಸಮುದಾಯ ಸಹಕಾರ ಕೊಡುವುದಿಲ್ಲ. ಇಡೀ ಜಿಲ್ಲೆಯಲ್ಲಿ ನಡೆಯುವ ವ್ಯಾಪಕ ಡ್ರಗ್ಸ್ ಜಾಲ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಾರ್ಕಳದ (Karkala Rape Case) ದುರ್ಘಟನೆ ಬಹಳ ಹೇಯಕೃತ್ಯ. ಪೊಲೀಸರು ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧನ ಮಾಡಬೇಕು. ಮಹಿಳೆಯರು ಮಕ್ಕಳು ಬಹಳ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಪೋಷಕರು ಬಹಳಷ್ಟು ಎಚ್ಚರಿಕೆಯನ್ನು ವಹಿಸಬೇಕು. ಸಂತ್ರಸ್ತ ಯುವತಿಗೆ ಸರಿಯಾದ ನ್ಯಾಯ ಸಿಗಬೇಕು ಎಂದು ಬಿಜೆಪಿ ನಾಯಕಿ ರಮಿತಾ ಶೈಲೇಂದ್ರ ಆಗ್ರಹಿಸಿದ್ದಾರೆ. ಇದನ್ನೂ ಓದಿ: Karkala | ಕಿಡ್ನಾಪ್‌ಗೈದು ಮದ್ಯದಲ್ಲಿ ಅಮಲು ಪದಾರ್ಥ ಸೇರಿಸಿ ರೇಪ್‌ – ಉಡುಪಿ ಎಸ್‌ಪಿ ಹೇಳಿದ್ದೇನು?