ಚಿಕ್ಕಮಗಳೂರು: ನಾಡಿನೆಲ್ಲೆಡೆ ಇಂದು ದಸರಾ ಹಾಗೂ ಆಯುಧ ಪೂಜೆಯ ಸಂಭ್ರಮ. ಕಾಫಿನಾಡಿ ಚಿಕ್ಕಮಗಳೂರಿನಲ್ಲೂ ಜನಸಾಮಾನ್ಯರು ಸಂಭ್ರಮದಿಂದ ಆಯುಧ ಪೂಜೆಯನ್ನ ಆಚರಿಸಿದ್ದಾರೆ. ಆದರೆ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂಗಳಂತೆ ತನ್ನ ವಾಹನಗಳಿಗೆ ಆಯುಧ ಪೂಜೆ ಮಾಡಿರೋದು ಮಾತ್ರ ವಿಶೇಷವಾಗಿದೆ.

ಎಸ್‍ಎಂಎಸ್ ಬಸ್ ಮಾಲೀಕರಾದ ಸಿರಾಜ್ ಹಿಂದೂಗಳಿಗೆ ಕಡಿಮೆ ಇಲ್ಲದಂತೆ ಆಯುಧ ಪೂಜೆಯನ್ನ ಆಚರಿಸಿದ್ದಾರೆ. ಹಿಂದು-ಮುಸ್ಲಿಂ ಎಂಬ ಭೇದ-ಭಾವವಿಲ್ಲ. ನಾವು ವಾಹನಗಳನ್ನ ಇಟ್ಟಿದ್ದೇವೆ. ಅನ್ನ ತಿನ್ನುತ್ತಿರೋದು ಅದರಲ್ಲೇ. ನಾವೆಲ್ಲರೂ ಒಂದೇ. ಭೂಮಿಯ ಮೇಲೆ ಇರುವುದು ಎರಡೇ ಜಾತಿ. ಒಂದು ಹೆಣ್ಣು, ಮತ್ತೊಂದು ಗಂಡು ಹಿಂದೂ ಮುಸ್ಲಿಂ ಎಂಬ ಭೇದ-ಭಾವ ಮಾಡೋದು ಕಿಡಿಗೇಡಿಗಳು ನಾವೆಲ್ಲರೂ ಒಂದೇ ಎಂದು ಹೇಳಿ ಅದ್ಧೂರಿಯಾಗಿ ಆಯುಧ ಪೂಜೆ ಆಚರಿಸಿದ್ದಾರೆ.
ತನ್ನ ಬಸ್ಸುಗಳಿಗೆ ಚೆಂಡು ಹೂವಿನಿಂದ ಸಿಂಗಾರ ಮಾಡಿ, ಬಲೂನ್, ಬಾಳೆದಿಂಡು, ಮಾವಿನತೋರಣ ಕಟ್ಟಿ ಪೂಜೆ ಮಾಡಿ ಅಕ್ಕಪಕ್ಕದವರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply