ಮುಸ್ಲಿಂ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಬಾರದು – AIMPLB ವಿರೋಧ

ನವದೆಹಲಿ: ಮಕ್ಕಳು ಸೂರ್ಯ ನಮಸ್ಕಾರ ಮಾಡಬೇಕೆಂಬ ಸರ್ಕಾರದ ಆದೇಶಕ್ಕೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ವಿರೋಧಿಸಿದೆ. ಮುಸ್ಲಿಂ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡುವಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.

ಡಿಸೆಂಬರ್ 29 ರಂದುವಿಶ್ವವಿದ್ಯಾಲಯ ಅನುದಾನ ಆಯೋಗ ಭಾರತ ಸ್ವಾತಂತ್ರ್ಯ ಪಡೆದು 75 ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಪ್ರಯುಕ್ತ ದೇಶಾದ್ಯಂತ 30,000 ಸಂಸ್ಥೆಗಳ 3 ಲಕ್ಷ ವಿದ್ಯಾರ್ಥಿಗಳು ತ್ರಿವರ್ಣ ಧ್ವಜದ ಮುಂದೆ ಸೂರ್ಯ ನಮಸ್ಕಾರ ಮಾಡುವಂತೆ ಸುತ್ತೋಲೆ ಹೊರಡಿಸಿದೆ. ಇದನ್ನೂ ಓದಿ: ಆದಿ ಚುಂಚನಗಿರಿ ಕ್ಷೇತ್ರದಲ್ಲಿ ಜ.4-5ರಂದು ರಾಜ್ಯ ಮಟ್ಟದ ಯುವಜನೋತ್ಸವ: ನಾರಾಯಣಗೌಡ

ಈ ಬಾರಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸ್ಮರಣಾರ್ಥವಾಗಿ ಜನವರಿ 1 ರಿಂದ ಫೆಬ್ರವರಿ 7 ರವರೆಗೆ 30 ರಾಜ್ಯಗಳಿಂದ 30,000 ಸಂಸ್ಥೆಗಳ 3 ಲಕ್ಷ ವಿದ್ಯಾರ್ಥಿಗಳು  75 ಕೋಟಿ  ಸೂರ್ಯ ನಮಸ್ಕಾರ ಮಾಡಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಹೇಳಿದ್ದಾರೆ.

ಈ ಬಗ್ಗೆ ಪ್ರಧಾನ ಕಾರ್ಯದರ್ಶಿ ಮೌಲಾನಾ ಖಲಿದ್ ಸೈಫುಲ್ಲಾ ರಹಮಾನಿ ಅವರು, ಸರ್ಕಾರ ಬಹುಸಂಖ್ಯಾತರ ಚಿಂತನೆ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಇತರರ ಮೇಲೆ ಹೇರಲು ಪ್ರಯತ್ನಿಸುತ್ತಿದೆ. ಇದು ಅಸಂವಿಧಾನಿಕ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಒಂದೇ ದಿನದಲ್ಲಿ 100 ವೈದ್ಯರಿಗೆ ಕೋವಿಡ್ ಪಾಸಿಟಿವ್!

ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಮತ್ತು ಸೂರ್ಯನನ್ನು ಪೂಜಿಸುವುದಿಲ್ಲ. ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪ್ರತಿಪಾದಿಸಿದೆ.

Comments

Leave a Reply

Your email address will not be published. Required fields are marked *