ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ ಗೆಲ್ಲುತ್ತಿದ್ದ: ಹರೀಶ್ ರಾವತ್

ಡೆಹ್ರಾಡೂನ್: ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ ಗೆಲ್ಲುತ್ತಿದ್ದ ಎಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ.

ನಾನು ಲಾಲ್ ಕುವಾನ್‍ನಿಂದ ಗೆಲ್ಲುತ್ತೇನೆ. ನನ್ನ ಮಗಳೂ ಹರಿದ್ವಾರದಿಂದ ಗೆಲ್ಲುತ್ತಾಳೆ. ನನ್ನ ಮಗನಿಗೆ ಪಕ್ಷ ಟಿಕೆಟ್ ನೀಡಿದ್ದರೆ ಆ ಸ್ಥಾನ ಕಾಂಗ್ರೆಸ್ ಪಾಲಾಗುತ್ತಿತ್ತು. ಆದರೆ ನನ್ನ ಮಗನಿಗೆ ಟಿಕೆಟ್ ನೀಡಿಲ್ಲ ಎಂದು ರಾವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ – ಪ್ರತಿಭಟನಕಾರರನ್ನು ತಡೆದ ಪೊಲೀಸರು

ನನ್ನ ಗೆಲುವಿನ ಅಂತರದ ಬಗ್ಗೆ ಹೇಳಲಾರೆ. ಜನರು ನನ್ನನ್ನು ಒಪ್ಪಿಕೊಂಡಿದ್ದಾರೆ ಮತ್ತು ನಾನು ಲಾಲ್ ಕುವಾನ್ ಕ್ಷೇತ್ರದಲ್ಲಿ ಗೆಲ್ಲುತ್ತೇನೆ ಎಂದು ಭಾವಿಸುತ್ತೇನೆ. ಲಾಲ್ ಕುವಾನ್‍ನ ಬಿಜೆಪಿ ಅಭ್ಯರ್ಥಿ ಮೋಹನ್ ಸಿಂಗ್ ಬಿಶ್ತ್ ಅವರಿಗೆ ನನ್ನ ಶುಭಾಶಯಗಳು. ಅವರು ನನಗೆ ಕಠಿಣ ಸ್ಪರ್ಧೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.

Pushkar Singh Dhami

ಕಾಂಗ್ರೆಸ್ 48 ಸ್ಥಾನಗಳನ್ನು ಪಡೆಯುವ ಮೂಲಕ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ಸುಮಾರು ಆರು ವಿಧಾನಸಭಾ ಸ್ಥಾನಗಳಲ್ಲಿ ಉತ್ತಮ ಹೋರಾಟವಿದೆ. ಚುನಾವಣೆಯಲ್ಲಿ ಪಕ್ಷವು 20 ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿರುವುದರಿಂದ ಬಿಜೆಪಿಯ ಗೌರವವನ್ನು ಉಳಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ನಾನು ಅಭಿನಂದಿಸುತ್ತೇನೆ. ಈ ಬಾರಿ ಜನರ ನಿರ್ಧಾರವು ಅವರ ವಿರುದ್ಧವಾಗಿದೆ ಎಂದು ಸಹ ನಾನು ಅವರಿಗೆ ಹೇಳಲು ಬಯಸುತ್ತೇನೆ. ಆದರೆ ಅವರು ಚಿಂತಿಸುವ ಅಗತ್ಯವಿಲ್ಲ. ಏಕೆಂದರೆ ಅವರ ಹಿರಿಯ ಸಹೋದರ ಹರೀಶ್ ರಾವತ್ ಅವರ ಆಶಯಗಳು ಅವರೊಂದಿಗಿವೆ ಎಂದಿದ್ದಾರೆ. ಇದನ್ನೂ ಓದಿ: ಹಿಜಬ್-ಕೇಸರಿ ವಿವಾದ – ಉಡುಪಿ, ಶಿವಮೊಗ್ಗದ ಕೆಲ ಕಾಲೇಜ್‍ಗಳಿಗೆ ರಜೆ ಘೋಷಣೆ

ಈ ಬಾರಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ನಾಯಕರು ಒಪ್ಪಿಕೊಳ್ಳುತ್ತಾರೆ. ಉತ್ತರಾಖಂಡಕ್ಕೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇವೆ. ಉತ್ತರಾಖಂಡದಲ್ಲಿ ಕಾಂಗ್ರೆಸ್ ಗೆದ್ದರೆ ಆ ಗೆಲುವಿನ ಶ್ರೇಯ ರಾಹುಲ್ ಗಾಂಧಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *