ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿ: ಗೃಹ ಸಚಿವ

ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು ಈಗ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ನಿಮಗೆ ಎಲ್ಲಾ ಮಾಹಿತಿ ನೀಡುತ್ತೇವೆ. ನಾನು ಅಥವಾ ಪೊಲೀಸರು ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ತಿಳಿಸಿದರು.

ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯದ ಬಳಿಕ ಆರೋಪಿಗಳು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕ ಎಲ್ಲಾ ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳೆಲ್ಲರೂ ಕೂಲಿಕಾರ್ಮಿಕರು!

ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದರೆ, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Comments

Leave a Reply

Your email address will not be published. Required fields are marked *