Nagamangala| ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

– ಪೊಲೀಸ್ ಠಾಣೆ ಎದುರು ಹಿಂದೂಗಳ ಪ್ರತಿಭಟನೆ

ಮಂಡ್ಯ: ಗಣಪತಿ ವಿಸರ್ಜನೆ (Ganesha Festival) ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದ ಘಟನೆ ನಾಗಮಂಗಲದಲ್ಲಿ (Nagamangala) ನಡೆದಿದೆ.

ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿ ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಗ್ತಿತ್ತು. ಈ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ.

ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳ ಪ್ರತಿಭಟನೆ ನಡೆಸುತ್ತಿದ್ದಾರೆ.

ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಕಿಡಿಗೇಡಿಗಳು ಗಣೇಶ ಮೂರ್ತಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೆರವಣಿಗೆ ವೇಳೆ ದರ್ಗಾ ಮುಂಭಾಗ ತಮಟೆ, ಡೊಳ್ಳು ಬಾರಿಸದಂತೆ ದುಷ್ಕರ್ಮಿಗಳು ಕಿರಿಕ್ ಮಾಡಿದ್ದಾರೆ. ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ಕೂಡ ಆಗಿದೆ. ಇದೇ ವೇಳೆ ಅನ್ಯಕೋಮಿನ ಯುವಕರು ಕತ್ತಿ ಜಳಪಿಸಿದ್ದಾರೆ.

ಕಲ್ಲು ತೂರಾಟದಿಂದ ಓರ್ವ ಯುವಕ ಗಾಯಗೊಂಡಿದ್ದಾನೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘುಲಾಠಿ ಪ್ರಹಾರ ಮಾಡಿದ್ದಾರೆ. ಕಳೆದ ವರ್ಷವೂ ಇದೇ ದರ್ಗಾ ಮುಂಭಾಗ ಗಲಾಟೆ ನಡೆದಿತ್ತು.

ನಾಗಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.